ಜಿಲ್ಲೆ

ವಿದ್ಯುತ್ ವ್ಯತ್ಯಯ ನಾಳೆ

ಚಾಮರಾಜನಗರ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಚಾಮರಾಜನಗರ ಉಪವಿಭಾಗ ವ್ಯಾಪ್ತಿಯಲ್ಲಿ ಒಂದನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಮೇ 11ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಚಾಮರಾಜನಗರ ಟೌನ್-1, ಕೋಡಿಮೋಳೆ, ರಾಮಸಮುದ್ರ, ಮಾದಾಪುರ, ಕಾಗಲವಾಡಿ, ಸೋಮವಾರಪೇಟೆ ಟೌನ್-2, ಹರದನಹಳ್ಳಿ, ಬೇಡರಪುರ, ಟಿ.ಕೆ.ಮೋಳೆ, ಶಿವಪುರ, ಗೂಳಿಪುರ ಎನ್.ಜೆ.ವೈ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದ ಜತೆ ಸಹಕರಿಸಬೇಕು. ವಿದ್ಯುತ್ ಸಂಬಂಧ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಸಂಪರ್ಕಿಸುವಂತೆ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.