ಬೀದರ್‌ನ ಬ್ರಿಮ್ಸ್ ಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಚಿವ ಪೌರಾಡಳಿತ ಸಚಿವ ರಹೀಮ್‌ಖಾನ್, ಶಿವಕುಮಾರ ಶೆಟಕಾರ ಇದ್ದರು. 
ಜಿಲ್ಲೆ

ವಿದ್ಯುತ್ ವ್ಯತ್ಯಯ ವರದಿ ಸಲ್ಲಿಸಲು ಸೂಚನೆ

ಬೀದರ್: ಇಲ್ಲಿನ ಬ್ರಿಮ್ಸ್​ ಮಕ್ಕಳ ವಿಭಾಗದಲ್ಲಿ ವಿದ್ಯುತ್ ವ್ಯತ್ಯಯವಾದ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು, ಜಿಲ್ಲಾಧಿಕಾರಿಗೆ ಸೂಚಿಸಿದರು.

ಶುಕ್ರವಾರ ಬ್ರಿಮ್ಸ್ ಗೆ ಭೇಟಿ ನೀಡಿ ರೋಗಿಗಳೊಂದಿಗೆ ಚರ್ಚಿಸಿ ಮಾತನಾಡಿದ ಅವರು, ವಿದ್ಯುತ್ ವ್ಯತ್ಯಯ ಘಟನೆ ಗಂಭೀರವಾಗಿ ಪರಿಗಣಿಸಿದ್ದು, ಈ ಘಟನೆ ನಿರ್ಲಕ್ಷ್ಯದಿಂದ ಉಂಟಾಗಿದ್ದರೆ ಯಾವ ಕಾರಣಕ್ಕೂ ಕ್ಷಮಿಸಲಾಗದು. ಈ ಕುರಿತು ತಕ್ಷಣ ತನಿಖೆ ನಡೆಸಿ ವರದಿ ನೀಡಬೇಕು. ವರದಿ ಬಂದ ತಕ್ಷಣ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಅಸೌಕರ್ಯವಾಗದಂತೆ ಕ್ರಮ ಕೈಗೊಳ್ಳುತ್ತೇವೆ. ಜನತೆಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಪೌರಾಡಳಿತ ಸಚಿವ ರಹೀಮ್‌ಖಾನ್, ಜಿಪಂ ಸಿಇಒ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಬ್ರಿಮ್ಸ್ ನಿರ್ದೇಶಕ ಶಿವಕುಮಾರ ಶೆಟಕಾರ ಇತರರಿದ್ದರು.