ಜಿಲ್ಲೆ

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ರಾಯಚೂರು: ರಾಯಚೂರು ತಾಲೂಕಿನ ಶಕ್ತಿನಗರದಲ್ಲಿನ ರಾಯಚೂರು ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಸ್ಪರ್ಶವಾಗಿ ಗುತ್ತಿಗೆ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಶನಿವಾರ ಜರುಗಿದೆ.
ಕೇಂದ್ರದ 4ನೇ ಘಟಕದ ಎಎಸ್‌ಪಿಸಿ ವಿಭಾಗದಲ್ಲಿ ಕೆಲಸ ಮಾಡುವ ಯಾದಗಿರಿ ಮೂಲದ ಗುತ್ತಿಗೆ ಕಾರ್ಮಿಕರ ನಿಂಗಪ್ಪ (45) ಮೃತ ಕಾರ್ಮಿಕ. ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಸಂಪರ್ಕವಾಗಿದ್ದು, ಹೈಟೆನ್ಷನ್ ವಿದ್ಯುತ್‌ನಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಕಾರ್ಮಿಕನ ಸಾವಿನಿಂದಾಗಿ ಗುತ್ತಿಗೆ ಕಾರ್ಮಿಕರು ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿ ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರ ನೀಡಬೇಕು. ಕಾರ್ಮಿಕರಿಗೆ ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.