ಜಿಲ್ಲೆ

ವಿದ್ಯುನ್ಮಾನ ಮತಯಂತ್ರಗಳ ಪ್ರಥಮ ಹಂತದ ಪರಿಶೀಲನೆ

ಹಾಸನ : ಮುಂಬರಲ್ಲಿರುವ 2024ರ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಗೆ ಹಂಚಿಕೆಯಾಗಿರುವ 3,675 ಬ್ಯಾಲೆಟ್ ಯೂನಿಟ್, 2595 ಕಂಟ್ರೋಲ್ ಯೂನಿಟ್, 2789 ವಿವಿ ಪ್ಯಾಟ್ ವಿದ್ಯುನ್ಮಾನ ಮತಯಂತ್ರಗಳ ಪ್ರಥಮ ಹಂತದ ಪರಿಶೀಲನೆ ಕಾರ್ಯ ಆರಂಭವಾಗಿದ್ದು, ಸೆ.1 ರವರೆಗೆ ನಗರದ ಸರ್ಕಾರಿ ಇಂಜಿನಿಯರಿಂಗ್ ನಡೆಯಲಿದೆ.

ನಗರದ ಡೈರಿ ಸರ್ಕಲ್‌ನಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನ 20 ಜನ ತಾಂತ್ರಿಕ ಪರಿಣಿತರ ತಂಡದ ಸಹಯೋಗದೊಂದಿಗೆ ವಿದ್ಯುನ್ಮಾನ ಮತಯಂತ್ರಗಳ ಪ್ರಥಮ ಹಂತದ ಪರಿಶೀಲನೆ ಕಾರ್ಯವನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಸಮಕ್ಷಮದಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ನಡೆಸಲಾಗುತ್ತಿದೆ.