ಹಾಸನ: ನಗರದ ಗಣಪತಿ ಪೆಂಡಾಲ್‌ನಲ್ಲಿ ಪ್ರತಿಷ್ಟಾಪಿಸಲಾಗಿರುವ ವಿಘ್ನ ವಿನಾಯಕನಿಗೆ ಶಾಸಕ ಸ್ವರೂಪ್ ಪ್ರಕಾಶ್ ತಮ್ಮ ಕುಟುಂಬ ಸಮೇತ ಬುಧವಾರ ವಿಶೇಷ ಪೂಜೆ ಸಲ್ಲಿಸಿದರು. ತಾಯಿ ಲಲಿತಮ್ಮಾ ಹಾಗೂ ಪತ್ನಿ ಶ್ವೇತಾ ಸ್ವರೂಪ್ ಅವರರೊಂದಿಗೆ ಪೂಜೆ ಸಲ್ಲಿಸಿದ ಶಾಸಕರು ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕೂಡ ನೆರವೇರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವರೂಪ್, ಗಣಪತಿ ಸೇವಾ ಸಮಿತಿ ವತಿಯಿಂದ ಕಳೆದ ಹಲವು ವರ್ಷಗಳಿಂದ ನಮ್ಮ ತಂದೆಯವರು ಶಾಸಕರಾಗಿದ್ದ ಸಂದರ್ಭದಲ್ಲಿಯೂ ಒಂದು ದಿನ ಭಕ್ತಾದಿಗಳಿಗೆ ಪ್ರಸಾದ ಮತ್ತು ಪೂಜಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದರು. ಈ ಬಾರಿಯೂ ಮುಂದುವರೆಸಿಕೊಂಡು ಬರಲಾಗಿದೆ. ರಾಜ್ಯದ ಹಾಗೂ ಜಿಲ್ಲೆಯ ಎಲ್ಲರಿಗೂ ದೇವರು ಆರೋಗ್ಯ, ಭಾಗ್ಯ, ಐಶ್ವರ್ಯ ಕೊಟ್ಟು ಕಾಪಾಡಲಿ ಎಂದು ದೇವರಲ್ಲಿ ಬೇಡಿದ್ದೆನೆ. ಜಿಲ್ಲೆಯಲ್ಲಿ ಸಮೃದ್ಧ ಮಳೆ, ಬೆಳೆಯಾಗಿ ರೈತರಿಗೆ ನೆಮ್ಮದಿ ಬದುಕು ನೀಡಲಿ ಎಂದರು.
ಈ ಸಂದರ್ಭದಲ್ಲಿ ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಡಾ.ನಾಗರಾಜ್ ಪದಾಧಿಕಾರಿಗಳಾದ ಚನ್ನವೀರಪ್ಪ, ಎಂ,ಕೆ. ಕಮಲ್‌ಕುಮಾರ್, ಗಿರೀಶ್ ಚನ್ನವೀರಪ್ಪ ಸೇರಿದಂತೆ ಇನ್ನಿತರರು ಇದ್ದರು.