ಜಿಲ್ಲೆ

ವಿಮಾನ ನಿಲ್ದಾನ ಕಾಮಗಾರಿ ಪರಿಶೀಲಿಸಿದ ಎಚ್‌ಡಿಕೆ

ಹಾಸನ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ನಿರ್ಮಾಣ ಹಂತದಲ್ಲಿರುವ ಹಾಸನ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಾಮಗಾರಿ ಪ್ರಗತಿ ಬಗ್ಗೆ ಏರ್‌ಪೋರ್ಟ್ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಅವರಿಂದ ಮಾಹಿತಿ ಪಡೆದು ಕೊಂಡರು.

ಈ ವೇಳೆ ಸ್ಥಳೀಯ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಅವರು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಐಟಿ ಪಾರ್ಕ್ ಅಗತ್ಯವಿದ್ದು ನಿರ್ಮಾಣ ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು.

‘ಹಾಸನ ವಿಶ್ವಪ್ರಸಿದ್ಧ ಪ್ರವಾಸಿತಾಣ ಹೊಂದಿರುವ ಶಿಲ್ಪಕಲಾ ಶ್ರೀಮಂತಿಕೆಯ ಜಿಲ್ಲೆಯಾಗಿದೆ. ಬೆಂಗಳೂರು- ಮಂಗಳೂರು ನಡುವೆ ಸಮಾನಾಂತರವಾಗಿ ಹಾಸನ ಅಪಾರ ಉದ್ಯೋಗಾವಕಾಶ ಸೃಷ್ಟಿ ಮಾಡಬಲ್ಲ ಸಾಮರ್ಥ್ಯ ಇರುವ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ 6ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜು, 11 ಡಿಪ್ಲೊಮಾ ಕಾಲೇಜುಗಳಿವೆ. ನೆರೆಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂಜಿನಿಯರಿಂಗ್ ಕಾಲೇಜುಗಳಿವೆ. ಎಲ್ಲ ಕಾಲೇಜುಗಳಿಂದ ಪ್ರತಿ ವರ್ಷ ಹೊರಬರುವ ತಾಂತ್ರಿಕ ಪದವೀಧರರು ಬೆಂಗಳೂರು, ಮುಂಬೈ ಸೇರಿದಂತೆ ದೂರದ ಮಹಾನಗರಗಳಿಗೆ ಕೆಲಸ ಅರಸಿ ಹೋಗಬೇಕಾದ ಅನಿವಾರ್ಯತೆ ಇದೆ. ಇದರಿಂದ ಜಿಲ್ಲೆ ಕೃಷಿ ಮತ್ತು ಆರ್ಥಿಕತೆಯ ಮೇಲೂ ದುಷ್ಪರಿಣಾಮ ಬೀರುತ್ತಿದೆ.’

‘ತಾಂತ್ರಿಕ ಪದವೀಧರರಿಗೆ ಹಾಸನ ಜಿಲ್ಲೆಯಲ್ಲೇ ಉದ್ಯೋಗ ದೊರೆಯುವಂತಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ನೆರವಾಗಲಿದೆ, ಅಲ್ಲದೆ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೂ ಇಂಬು ಕೊಡಲಿದೆ. ಅದಕ್ಕಾಗಿ ಜಿಲ್ಲೆಯಲ್ಲಿ ಐಟಿ ಪಾರ್ಕ್ ನಿರ್ಮಾಣದ ಅಗತ್ಯವಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾಸನ ಹತ್ತಿರ ಇರುವುದರಿಂದ ಹೂಡಿಕೆದಾರರಿಗೂ ಪ್ರಶಸ್ತ ತಾಣವಾಗಿದೆ. ಐಟಿ ಪಾರ್ಕ್‌ನಿಂದ ಸಾವಿರಾರು ಜನರಿಗೆ ಉದ್ಯೋಗ ಸಿಗಲಿದೆ. ಆದ್ದರಿಂದ ತಾವು ಜಿಲ್ಲೆಯ ಐಟಿ ಪಾರ್ಕ್ ಮಂಜೂರು ಮಾಡಿಸಿಕೊಡಬೇಕು,’ ಎಂದು ಶಾಸಕರು ಮನವಿ ಮಾಡಿದ್ದಾರೆ.

----

ಫೋಟೋ ಶೀರ್ಷಿಕೆ

15 ಎಚ್‌ಎಸ್‌ಎನ್ 03

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ನಿರ್ಮಾಣ ಹಂತದಲ್ಲಿರುವ ಹಾಸನ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಾಮಗಾರಿ ಪ್ರಗತಿ ಬಗ್ಗೆ ಏರ್‌ಪೋರ್ಟ್ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಅವರಿಂದ ಮಾಹಿತಿ ಪಡೆದು ಕೊಂಡರು. ಶಾಸಕ ಸ್ವರೂಪ್ ಪ್ರಕಾಶ್ ಇದ್ದರು.