ವಿರಾಜಪೇಟೆ: ಜನಸಾಮಾನ್ಯರಿಗೆ ಕೈಗೆಟುಕುವಂತೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಮ್ಮ ಕ್ಲಿನಿಕ್ ಯೋಜನೆಯನ್ನು ವಿರಾಜ ಪೇಟೆಯಲ್ಲಿ ಪ್ರಾರಂಭಿಸುತ್ತಿದ್ದು, ಜಿಲ್ಲೆಯ ಪ್ರಥಮ ನಮ್ಮ ಕ್ಲಿನಿಕ್ ಇದಾಗಿದೆ. ರಾಜ್ಯದ ಎಲ್ಲ ಕ್ಲಿನಿಕ್‌ಗಳನ್ನು ಏಕಕಾಲದಲ್ಲಿ ಉದ್ಘಾಟಿಸಲಾಗುವುದು ಎಂದು ಶಾಸಕ ಕೆ.ಜಿ ಬೋಪಯ್ಯ ಹೇಳಿದರು.
ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಮೊಗರಗಲ್ಲಿಯಲ್ಲಿ ಪ್ರಾರಂಭಗೊಳ್ಳುತ್ತಿ ರುವ ನಮ್ಮ ಕ್ಲಿನಿಕ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ನಮ್ಮ ಕ್ಲಿನಿಕ್ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹೊರತಾಗಿ ನಗರ ಪಟ್ಟಣಗಳ ವಾರ್ಡ್ ಮಟ್ಟದಲ್ಲಿ ಆರೋಗ್ಯ ಸೇವೆ ಗಳನ್ನು ನೀಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳ ಒತ್ತಡವನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ.
ಪ್ರಸ್ತುತ ಖಾಸಗಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ನಮ್ಮ ಕ್ಲಿನಿಕ್ ಆಜು ಬಾಜಿನಲ್ಲಿ ಸರ್ಕಾರಿ ಜಾಗ ಇದ್ದರೆ ಗುರುತಿಸುವಂತೆ ಪುರಸಭೆ ಮುಖ್ಯಾಧಿ ಕಾರಿ ಚಂದ್ರಕುಮಾರ್ ಅವರಿಗೆ ಸೂಚಿಸಿ ದರು. ರಾಜ್ಯದಲ್ಲಿ ಒಟ್ಟು 438 ನಮ್ಮ ಕ್ಲಿನಿಕ್‌ಗಳಿವೆ. ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹೊರತಾಗಿ ನಗರ ಪಟ್ಟಣಗಳಲ್ಲಿರುವ ವಾರ್ಡ್ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುವ ಸಲುವಾಗಿ ಇಂತಹ ಕೇಂದ್ರ ಗಳನ್ನು ಪ್ರಾರಂಭಿಸಲಾಗುತ್ತಿದೆ.
ಬೆಳಗ್ಗೆ 9ರಿಂದ ಸಂಜೆ 4.30 ಗಂಟೆಯವರೆಗೆ ಆರೋಗ್ಯ ಸೇವೆ ಲಭಿಸಲಿದೆ. ವೈದ್ಯ, ದಾದಿ, ಲ್ಯಾಬ್ ಟೆಕ್ನೀಷಿಯನ್, ಗ್ರೂಪ್ ಸಿ ನೌಕರ ಇರುತ್ತಾರೆ. ತಪಾಸಣೆ, ಔಷಧ ಎಲ್ಲವೂ ಉಚಿತ. 12 ಮಾದರಿಯ ಆರೋಗ್ಯ ತಪಾಸಣೆಗಳನ್ನು ನಡೆಸ ಲಾಗುತ್ತದೆ. 14 ವಿವಿಧ ಪ್ರಯೋಗ ನಡೆಸಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಬೇಕಿ ದ್ದರೆ ಇ-ಸಂಜಿವಿನಿ ಮತ್ತು ಟೆಲಿಕೌನ್ಸೆ ಲಿಂಗ್ ವ್ಯವಸ್ಥೆ ಇರುತ್ತದೆ ಎಂದರು.
ಪುರಸಭೆ ಅಧ್ಯಕ್ಷೆ ಸುಶ್ಮಿತಾ, ಸದಸ್ಯರಾದ ಎಸ್.ಎಚ್. ಮತೀನ್, ಮನೇಯಪಂಡ ದೇಚಮ್ಮ ಕಾಳಪ್ಪ, ಜೂನಾ ಸುನೀತಾ, ಜಲೀಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಯತಿರಾಜ್, ಮುಖ್ಯಾಧಿಕಾರಿ ಚಂದ್ರಕುಮಾರ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಅಚ್ಚಪಂಡ ಮಹೇಶ್, ಮೂಕೊಂಡ ಶಶಿ ಸುಬ್ರಹ್ಮಣ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಟ್ರಪಂಡ ರಘು ನಾಣಯ್ಯ ಮತ್ತಿತರರು ಹಾಜರಿದ್ದರು.