ವಿರಾಜಪೇಟೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರ ಸಭೆ ಸಂತ ಅನ್ನಮ್ಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. 
ಜಿಲ್ಲೆ

ವಿರಾಜಪೇಟೆಯಲ್ಲಿ ಮುಖ್ಯ ಶಿಕ್ಷಕರ ಸಭೆ

ವಿರಾಜಪೇಟೆ: ಮೇ 29ರಿಂದ ಶಾಲೆಗಳು ಆರಂಭವಾಗಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ವನಜಾಕ್ಷಿ ಶಿಕ್ಷಕರಿಗೆ ಸೂಚಿಸಿದರು.
ಪಟ್ಟಣದ ಸಂತ ಅನ್ನಮ್ಮ ಶಾಲೆಯ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದ ಅವರು, ಕೊಠಡಿಗಳು, ಆವರಣ, ಅಡುಗೆಕೋಣೆ, ಅಡುಗೆ ಪಾತ್ರೆಗಳು, ಆಹಾರ ಧಾನ್ಯಗಳು, ನೀರಿನ ಸಂಪ್ ಇತ್ಯಾದಿಗಳನ್ನು ಸ್ವಚ್ಛಗೊಳಿಸಬೇಕು. ತರಗತಿ, ಶಾಲಾ ವೇಳಾಪಟ್ಟಿಯನ್ನು ಸಿದ್ಧಗೊಳಿಸಿಕೊಳ್ಳಬೇಕು. 2023-24ನೇ ಸಾಲಿನ ಪಠ್ಯಪುಸ್ತಕಗಳು ಹಾಗೂ ಸಮವಸ್ತ್ರಗಳನ್ನು ಮೇ 30ರೊಳಗೆ ಮಕ್ಕಳಿಗೆ ಕಡ್ಡಾಯವಾಗಿ ವಿತರಿಸಿ ದಾಖಲೀಕರಿಸಬೇಕು ಎಂದು ಸೂಚಿಸಿದರು.
ತಾಲೂಕು ಸರ್ಕಾರಿ ಪ್ರೌಢಶಾಲೆಗಳ ಅಧ್ಯಕ್ಷ ಉತ್ತಪ್ಪ, ತಾಲೂಕು ಸರ್ಕಾರಿ ಪ್ರಾಥಮಿಕ ಶಾಲೆಗಳ ಅಧ್ಯಕ್ಷ ಸುರೇಂದ್ರ, ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕುಮಾರ್, 7 ಕ್ಲಸ್ಟರ್‌ನ ಸಿ.ಆರ್.ಪಿಗಳು, ಬಿ.ಆರ್.ಪಿಗಳು, ಬಿ.ಐ.ಆರ್.ಟಿಗಳು ಹಾಜರಾಗಿದ್ದರು.