ಜಿಲ್ಲೆ

ವಿವಿಧ ಕೋರ್ಸ್ ಗಳಿಗೆ ಪ್ರವೇಶ

ಚಾಮರಾಜನಗರ: ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕೊಳ್ಳೇಗಾಲ ಪ್ರಾದೇಶಿಕ ಕೇಂದ್ರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಜುಲೈ ಆವೃತ್ತಿಯಲ್ಲಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರೈಸ್ತ, ಜೈನ, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಜುಲೈ ಆವೃತ್ತಿಯ 2025-26ನೇ ಸಾಲಿನ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಎಲ್.ಐ.ಎಸ್ಸಿ ಹಾಗೂ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಎಲ್.ಐಎಸ್ಸಿ, ಎಂ.ಸಿ.ಎ ಮತ್ತು ಪದವಿ, ಡಿಪ್ಲೋಮಾ, ಸರ್ಟಿಫಿಕೆಟ್ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಬಹುದು. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೊಳ್ಳೇಗಾಲ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಎನ್. ಧನಲಕ್ಷ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.