ಚಾಮರಾಜನಗರ: ಗುಂಡ್ಲುಪೇಟೆಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈಮೇಕಿಂಗ್, ಡಿಪ್ಲೊಮಾ ಇನ್ ಮೆಕಾಟ್ರೋನಿಕ್ಸ್ ಮತ್ತು ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ದೀರ್ಘಾವಧಿ ಕೋರ್ಸ್‌ಗಳಿಗೆ 2025-26ನೇ ಸಾಲಿನ ತರಬೇತಿಗಾಗಿ ಪ್ರವೇಶಾತಿ ನೀಡಲಾಗುತ್ತಿದೆ. ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಬರೆದಿರುವ ಅಥವಾ ಎಸ್.ಎಸ್.ಎಲ್.ಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಟೂಲ್ ರೂಂ ಮಷಿನಿಷ್ಟ್ ಹಾಗೂ ಇನ್ನಿತರ ಅಲ್ಪಾವಧಿ ಕೋರ್ಸ್‌ಗಳಿಗೆ ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ 8147384716 ಸಂಪರ್ಕಿಸುವಂತೆ ಗುಂಡ್ಲುಪೇಟೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.