ಜಿಲ್ಲೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯೆಯರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ನಡೆಸಿದರು. ಜಿಲ್ಲಾಡಳಿತ ಭವನದ ಮುಂಭಾಗ ಕುಳಿತ ಧರಣಿ ನಡೆಸಿದರು.

ರಾಜ್ಯದಲ್ಲಿ ಎ್ಆರ್‌ಎಸ್ ಕಡ್ಡಾಯಗೊಳಿಸಬೇಕು. ಟಿಎಚ್‌ಆರ್ ಮೂಲಕ ಲಾನುಭವಿಗಳ ಪೋಷಣ್ ಟ್ರ್ಯಾಕ್ಟರ್‌ನ ಕೆಲಸಗಳಲ್ಲಿ ಅಂಗನವಾಡಿ ನೌಕರರಿಗೆ ತೊಂದರೆ ಕೊಡಬಾರದು. ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ನೌಕರರನ್ನು ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು.

29 ಕಾರ್ಮಿಕ ಕೂನೂನುಗಳನ್ನು ಉಳಿಸಿ, ಹೊಸದಾಗಿ ತಂದಿರುವ 4 ಸಂಹಿತೆಗಳನ್ನು ರದ್ದುಗೊಳಿಸಬೇಕು. ಐಎಸ್‌ಡಿಎಸ್ ಯೋಜನೆಗೆ ಬಜೆಟ್ ಅನ್ನು ಹೆಚ್ಚಿಸಬೇಕು. ಲಾನುಭವಿಗಳಿಗೆ ಕೊಡುವ ಘಟಕ ವೆಚ್ಚ ಹೆಚ್ಚಿಸಬೇಕು. 26 ಸಾವಿರ ಕನಿಷ್ಠ ವೇತನ, 10 ಸಾವಿರ ಮಾಸಿಕ ಪಿಂಚಣಿ ಕೊಡಬೇಕು. ರಾಜ್ಯದಲ್ಲಿ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಪ್ರಾರಂಭಿಸಬೇಕು. ಅಂಗನವಾಇ ಕೇಂದ್ರಗಳಿಗೆ ಮೂಲ ಸೌಕರ್ಯಗಳನ್ನು ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಬಿಎಲ್‌ಒ ಮತ್ತು ಜನಗಣತಿ ಮುಂತಾದ ಕೆಲಸಗಳಿಗೆ ನೇಮಿಸಬಾರದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ರವಾನಿಸಿದರು. ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆಯರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.

ಸಂಘದ ಜಿಲ್ಲಾಧ್ಯಕ್ಷೆ ಸುಜಾತಾ, ಪ್ರಧಾನ ಕಾರ್ಯದರ್ಶಿ ನಾಗಮಣಿ, ಖಜಾಂಚಿ ಭಾಗ್ಯ, ಚಿಕ್ಕತಾಯಮ್ಮ, ಪುಷ್ಪಲತಾ, ಚಿಕ್ಕನಾಗಮ್ಮ, ಚಿಕ್ಕಮಣಿ, ನೀಲಾಂಬಿಕೆ, ಪುಟ್ಟಮ್ಮ, ಶಾಂತಮ್ಮ, ಮಂಜುಳಾ, ರಾಣಿ ಇತರರು ಪಾಲ್ಗೊಂಡಿದ್ದರು.