ಚಾಮರಾಜನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.ಜಯಲಕ್ಷ್ಮೀ, ಭಾಗ್ಯ, ಸುಜಾತ, ಮಂಜುಳಾ, ಪುಟ್ಟಮ್ಮ, ಪುಷ್ಪಲತಾ, ವೇದಾವತಿ, ಸವಿತಾ ಮತ್ತು ಇತರರು ಇದ್ದರು. 
ಜಿಲ್ಲೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಜೈ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತಲುಪಿ ಕೆಲ ಕಾಲ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನರೇಗಾ ಯೋಜನೆಯಡಿ ಕೆಲಸ ಮಾಡಿ ಸ್ವಾಭಿಮಾನ ಹಾಗೂ ಘನತೆಯಿಂದ ಬದುಕುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಸರ್ಕಾರದ ಹೊಸ ತಂತ್ರಜ್ಞಾನ ಹಾಗೂ ನೀತಿಗಳಿಂದ ಕಾರ್ಮಿಕರು ಸಂಕಷ್ಟ ಅನುಭವಿಸುವಂತಾಗಿದೆ. ಒಂದು ಕುಟುಂಬಕ್ಕೆ 200 ದಿನಗಳ ಕೆಲಸ ನೀಡಬೇಕು. ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿ ಊಟಕ್ಕೂ ಗತಿ ಇಲ್ಲದ ಪರಿಸ್ಥಿತಿ ಇದೆ. ಅಧಿಕಾರಿಗಳು ಕೆಲಸ ನೀಡುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಜಯಲಕ್ಷ್ಮೀ, ಭಾಗ್ಯ, ಸುಜಾತಾ, ಮಂಜುಳಾ, ಪುಟ್ಟಮ್ಮ, ಜ್ಯೋತಿ, ಸುಶೀಲಾ, ಪುಷ್ಪಲತಾ, ವೇದಾವತಿ, ಸವಿತಾ ಸೇರಿದಂತೆ ಇತರರು ಇದ್ದರು.