ಬಳ್ಳಾರಿ : ಮೀಸಲಾತಿ ವಿರೋಧಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂಬಂತೆ ಬಿಂಬಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಡೆ ಖಂಡಿಸಿ ಹಾಗೂ ಶಾಸಕ ಮುನಿರತ್ನ ಜಾತಿನಿಂದನೆ ಮತ್ತು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಡಿಸಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಗುರುವಾರ ಪ್ರತಿಭಟಿಸಿತು.
ಒಂದು ದೇಶ ಒಂದು ಚುನಾವಣೆಯ ಇದೊಂದು ಕೇಂದ್ರ ಸರ್ಕಾರದ ಭಾಗವಾಗಿದೆ. ಆದ್ದರಿಂದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಪ್ರಸ್ತಾಪದ ಒಕ್ಕೂಟದ ವ್ಯವಸ್ಥೆಗೆ ಸಮಿತಿ ವಿರೋಧವಿದೆ. ಆಡಳಿತಾರೂಡ ಬಿಜೆಪಿಯ ಗುಪ್ತ ಅಜೆಂಡಾವನ್ನು ಒಳಗೊಂಡಿರುವ ಒಂದು ದೇಶ ಒಂದು ಚುನಾವಣೆ ಪ್ರಸ್ತಾಪವನ್ನು ಸಂಸತ್ ಒಳಗೆ ಮತ್ತು ಹೊರಗೆ ದೇಶದ ಜನಾಭಿಪ್ರಾಯವು ವ್ಯವಸ್ಥೆಗೆ ವಿರುದ್ಧವಾಗಿದ್ದು, ಕರ್ನಾಟಕ ದಲಿತ ಸಂಘ ಸಮಿತಿ ಖಂಡಿಸಿದೆ ಎಂದು ಪ್ರತಿಭಟನ ನಿರತರು ಆಗ್ರಹಿಸಿದರು.