ಚಿತ್ರದುರ್ಗ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಆ.31 ರೊಳಗೆ ಅರ್ಜಿ ಆಹ್ವಾನಿಸಿದೆ. ವೈಯಕ್ತಿಕ ಸಾಲ, ಗಂಗಾಕಲ್ಯಾಣ, ಅರಿವು, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ, ಸ್ವಾವಲಂಬಿ ಸಾರಥಿ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.
ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ, ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ, 3ಎ, ಮತ್ತು 3 ಬಿ ಸಮುದಾಯಗಳ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಿಗಮದ 080-22374832/08194-220882ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕಿ ಎಚ್.ಶಿಲ್ಪಾ ತಿಳಿಸಿದ್ದಾರೆ.