ಚಾಮರಾಜನಗರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಪಂಗಡ ಸಮುದಾಯದ ಜನಾಂಗದವರ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉಧ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಹಾಗೂ ಸ್ವಸಹಾಯ ಗುಂಪುಗಳಿಂದ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ನ.23ರೊಳಗೆ ಸಲ್ಲಿಸಬಹುದು. 2023-24ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮಗಳ ವೆಬ್‌ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ, ಎಸ್.ಟಿ ಸಹಾಯವಾಣಿ 9482-300-400 ಅನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.