ಹುಬ್ಬಳ್ಳಿ: ಕುಂದಗೋಳ ಮತ್ತು ಹುಬ್ಬಳ್ಳಿ ದಕ್ಷಿಣ ನಿಲ್ದಾಣಗಳಲ್ಲಿ ಕೈಗೊಂಡಿರುವ ಕಾಮಗಾರಿ ಹಿನ್ನೆಲೆಯಲ್ಲಿ ವಿವಿಧ ರೈಲುಗಳ ಸಂಚಾರ ರದ್ದು/ಭಾಗಶಃ ರದ್ದುಗೊಳಿಸಲಾಗಿದೆ.
ಜ.27ರಂದು ಅರಸಿಕೆರೆ - ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್ ರೈಲು ಸಂಚಾರ ರದ್ದಾಗಿದೆ.
ಭಾಗಶಃ ರದ್ದು : 27ರಂದು ಕೆಎಸ್ಆರ್ ಬೆಂಗಳೂರು - ಎಸ್ಎಸ್ಎಸ್ ಹುಬ್ಬಳ್ಳಿ ಜನಶತಾಬ್ದಿ ಡೈಲಿ ಎಕ್ಸ್ಪ್ರೆಸ್ ರೈಲು ಹರಿಹರದವರೆಗೆ ಮಾತ್ರ ಸಂಚರಿಸಲಿದೆ. ಹರಿಹರ-ಎಸ್ಎಸ್ಎಸ್ ಹುಬ್ಬಳ್ಳಿ ಮಧ್ಯದ ಸಂಚಾರ ರದ್ದಾಗಿದೆ. ಎಸ್ಎಸ್ಎಸ್ ಹುಬ್ಬಳ್ಳಿ - ಕೆಎಸ್ಆರ್ ಬೆಂಗಳೂರು ಜನಶತಾಬ್ದಿ ಡೈಲಿ ಎಕ್ಸ್ಪ್ರೆಸ್ ರೈಲು ಹರಿಹರದಿಂದ ಸಂಚಾರ ಪ್ರಾರಂಭಿಸಲಿದೆ.
ದ್ವಿಪಥ ಮಾರ್ಗ ಕಾಮಗಾರಿ : ಕುಂದಗೋಳ ಮೊದಲ ಹಂತದ ದ್ವಿಪಥ ಮಾರ್ಗ ನಿರ್ಮಾಣ ಕಾಮಗಾರಿ ಕೈಗೊಂಡಿರುವುದರಿಂದ ವಿವಿಧ ರೈಲುಗಳ ಸಂಚಾರ ರದ್ದು/ಭಾಗಶಃ ರದ್ದುಗೊಳಿಸಲಾಗಿದೆ.
ಜ. 31 ರಿಂದ ಫೆ. 4ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ - ಚಿತ್ರದುರ್ಗ- ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್, ಎಸ್ಎಸ್ಎಸ್ ಹುಬ್ಬಳ್ಳಿ - ಅರಸಿಕೆರೆ ಡೈಲಿ ಎಕ್ಸ್ಪ್ರೆಸ್, ಫೆ. 1 ರಿಂದ 5ರವರೆಗೆ ಅರಸಿಕೆರೆ- ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್, ಫೆ. 4ರಂದು ಬೆಳಗಾವಿ - ಮೈಸೂರು ವಿಶ್ವಮಾನವ ಡೈಲಿ ಎಕ್ಸ್ಪ್ರೆಸ್, 5ರಂದು ಮೈಸೂರು - ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್ಪ್ರೆಸ್ ರೈಲುಗಳ ಸಂಚಾರ ರದ್ದಾಗಿದೆ.
ಭಾಗಶಃ ರದ್ದು : ಜ. 31 ರಿಂದ ಫೆ. 4ರವರೆಗೆ ಕೆಎಸ್ಆರ್ ಬೆಂಗಳೂರು - ಎಸ್ಎಸ್ಎಸ್ ಹುಬ್ಬಳ್ಳಿ ಜನಶತಾಬ್ದಿ ಡೈಲಿ ಎಕ್ಸ್ಪ್ರೆಸ್ ರೈಲು ಸಂಚಾರ ಹರಿಹರ- ಎಸ್ಎಸ್ಎಸ್ ಹುಬ್ಬಳ್ಳಿ ಮಧ್ಯೆ ರದ್ದಾಗಿದ್ದು, ಈ ರೈಲು ಹರಿಹರವರೆಗೆ ಮಾತ್ರ ಸಂಚರಿಸಲಿದೆ. ಎಸ್ಎಸ್ಎಸ್ ಹುಬ್ಬಳ್ಳಿ - ಕೆಎಸ್ಆರ್ ಬೆಂಗಳೂರು ಜನಶತಾಬ್ದಿ ಡೈಲಿ ಎಕ್ಸ್ಪ್ರೆಸ್ ರೈಲು ಹರಿಹರದಿಂದ ಸಂಚಾರ ಪ್ರಾರಂಭಿಸಲಿದೆ.
ಫೆ. 2ರಂದು ಕೊಚುವೆಲಿ - ಎಸ್ಎಸ್ಎಸ್ ಹುಬ್ಬಳ್ಳಿ ವೀಕ್ಲಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ಸಂಚಾರ ಎಸ್ಎಂಎಂ ಹಾವೇರಿ- ಎಸ್ಎಸ್ಎಸ್ ಹುಬ್ಬಳ್ಳಿ ಮಧ್ಯೆ ರದ್ದಾಗಿದೆ.