ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ 80 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 127 ಸಹಾಯಕಿಯರ ಹುದ್ದೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಸ್ಥಳೀಯರಾಗಿರಬೇಕು ಹಾಗೂ ತಹಶೀಲ್ದಾರರು, ಉಪ ತಹಶೀಲ್ದಾರರಿಂದ ಪಡೆದ 3 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸಬೇಕು, ಮೀಸಲಾತಿ ಕೇಂದ್ರಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು, ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಲಗತ್ತಿಸಬೇಕು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನ.27ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚಾಮರಾಜನಗರ ಶಿಶು ಅಭಿವೃದ್ಧಿ ಯೋಜನೆ ದೂ.ಸಂ 08226-222603, ಸಂತೇಮರಹಳ್ಳಿ ದೂ.ಸಂ 08226-240215, ಕೊಳ್ಳೇಗಾಲ ಮತ್ತು ಹನೂರು ದೂ.ಸಂ 08224-252367, ಗುಂಡ್ಲುಪೇಟೆ ದೂ.ಸಂ 08229-222286, ಯಳಂದೂರು ಶಿಶು ಅಭಿವೃದ್ಧಿ ಯೋಜನೆ ದೂ.ಸಂ 08226-240224 ಅನ್ನು ಸಂಪರ್ಕಿಸಬಹುದೆಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.