ಬಳ್ಳಾರಿ : ನಗರದ ವಿವಿಧೆಡೆ ದಾಳಿ ನಡೆಸಿ ಐವರು ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ ತಿಳಿಸಿದ್ದಾರೆ.
ಇಲ್ಲಿನ ಗುಗ್ಗರಹಟ್ಟಿ, ಮುಂಡ್ರಿಗಿ ಕೈಗಾರಿಕೆ ಪ್ರದೇಶದ ಕಾರ್ಖಾನೆ ಮತ್ತು ಕೆ.ಸಿ ರಸ್ತೆಯಲ್ಲಿನ ಗ್ಯಾರೇಜ್, ಮೆಕ್ಯಾನಿಕ್ ಶಾಪ್ ದಾಳಿ ಮಾಡಿ ಐವರನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ