ವಿಜಯವಾಣಿ ಸುದ್ದಿಜಾಲ ಧಾರವಾಡ
ಆಲೂರ ವೆಂಕಟರಾವ್ 61ನೇ ಪುಣ್ಯಸ್ಮರಣೆ ನಿಮಿತ್ತ ನಗರದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಫೆ. 25ರಂದು ಬೆಳಗ್ಗೆ 10.30ಕ್ಕೆ ಆಲೂರ ವೆಂಕಟರಾವ ಭವನದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
ನಿವೃತ್ತ ಪ್ರಾಚಾರ್ಯ ಮನೀಶ ದೇಸಾಯಿ, ಡಾ. ಜಿನದತ್ತ ಹಡಗಲಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಟ್ರಸ್ಟ್ ಅಧ್ಯಕ್ಷ ಡಾ. ಪ್ರಮೋದ ಗಾಯಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.