ಮೈಸೂರು: ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಭೌತವಿಜ್ಞಾನ ಪ್ರಾಧ್ಯಾಪಕ ಪ್ರೊ.ಬಿ.ಎಸ್.ನರಸಿಂಹಪ್ರಸಾದ್(89) ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ನಿಧನರಾದರು.
ಸರಸ್ವತಿಪುರಂ ನಿವಾಸಿಯಾಗಿದ್ದ ಇವರಿಗೆ ಪತ್ನಿ ಪದ್ಮಾ, ಪುತ್ರಿಯರಾದ ತಾರಾ ಸುಧೀಂದ್ರ, ಹೇಮಾ ಇದ್ದಾರೆ.
ಮೈವಿವಿ ಸೇರಿದಂತೆ ಆಸ್ಟ್ರೇಲಿಯಾ, ಭುವನೇಶ್ವರದಲ್ಲೂ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದರು.
ಚಾಮುಂಡಿಬೆಟ್ಟದ ತಪ್ಪಲಿನ ವಿದ್ಯುತ್ ಚಿತಾಗಾರದಲ್ಲಿ ಸೋಮವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.