ಬಸವಕಲ್ಯಾಣ: ಬಸವಣ್ಣನವರ ಕಾಯಕ ಭೂಮಿಯ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದ್ದು, ನನಗೆ ಸಿಕ್ಕ ೨೪ ತಿಂಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿಪರ ಕೆಲಸ ಕೈಗೊಂಡಿರುವುದಾಗಿ ಶಾಸಕ ಶರಣು ಸಲಗರ ಹೇಳಿದರು.
ನಗರದ ರಥ ಮೈದಾನದಲ್ಲಿರುವ ಸಭಾ ಭವನದಲ್ಲಿ ತಾಲೂಕು ಆಡಳಿತ ಮಂಗಳವಾರ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಮಾತನಾಡಿ, ಬಸವಕಲ್ಯಾಣ ಅಂತಾರಾಷ್ಟಿçÃಯ ಪ್ರವಾಸಿ ಕೇಂದ್ರವಾಗಬೇಕು. ಜಗತ್ತಿನ ಜನ ನೋಡುವಂತಾಗಬೇಕು ಎಂದು ಆಶಿಸಿದರು.
ಸಹಾಯಕ ಆಯುಕ್ತ ಪ್ರಕಾಶ ಕುದರಿ ಮಾತನಾಡಿ, ದೇಶದ ಅಭಿವೃದ್ಧಿಗೆ ಎಲ್ಲರ ಸಹಕಾರ ಬೇಕು. ಸರ್ಕಾರದ ಯೋಜನೆ ಪ್ರತಿಯೊಬ್ಬರಿಗೂ ತಲುಪಿಸುವಲ್ಲಿ ಅಧಿಕಾರಿಗಳ ಪಾತ್ರ ನಿರ್ಣಾಯಕವಾಗಿದೆ. ಎಲ್ಲರೂ ಸಮಯ ಪ್ರಜ್ಞೆ, ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ತಹಸೀಲ್ದಾರ್ ಪೃಥ್ವಿರಾಜ ಪಾಟೀಲ್, ತಾಪಂ ಇಒ ಕಿರಣ ಪಾಟೀಲ್, ನಗರಸಭೆ ಪೌರಾಯುಕ್ತ ಮನೋಜಕುಮಾರ ಕಾಂಬಳೆ, ಸಿಪಿಐಗಳಾದ ಅಲಿಸಾಬ್, ವಿಜಯಕುಮಾರ ನಾಯಕ ಇತರರಿದ್ದರು. ತಹಸೀಲ್ದಾರ್ ರಮೆಶಬಾಬು ಸ್ವಾಗತಿಸಿದರು. ದೈಹಿಕ ಶಿಕ್ಷಕ ಶಿವಕುಮಾರ ಜಡಗೆ ನಿರೂಪಣೆ ಮಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳು, ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ಮೆರವಣಿಗೆ: ಐತಿಹಾಸಿಕ ಕೋಟೆಯಿಂದ ಮುಖ್ಯ ರಸ್ತೆ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಸಭಾ ಭವನದವರೆಗೆ ಮೆರವಣಿಗೆ ಜರುಗಿತು. ಆಯಾ ವೃತ್ತಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಶಾಸಕ ಶರಣು ಸಲಗರ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಮಾಜಿ ಎಂಎಲ್‌ಸಿ ವಿಜಯಸಿಂಗ್ ಇತರರು ಪಾಲ್ಗೊಂಡಿದ್ದರು.