ಜಿಲ್ಲೆ

ವಿಶ್ವದ ಶ್ರೇಷ್ಠ ದಾರ್ಶನಿಕ ಅಂಬೇಡ್ಕರ್​

ಅಥಣಿ: ಬಸವಣ್ಣನ ವಿಚಾರಧಾರೆಯಿಂದ ಪ್ರೇರಿತರಾದ ಡಾ.ಅಂಬೇಡ್ಕರ್​ ವಿಶ್ವಶ್ರೇಷ್ಠ ದಾರ್ಶನಿಕ. ಅವರನ್ನು ಒಂದು ಜಾತಿಗೆ ಸೀಮಿತ ಮಾಡದೆ ಎಲ್ಲರೂ ಅವರ ಜಯಂತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಲಕ್ಷ$್ಮಣ ಸವದಿ ಕರೆ ನೀಡಿದರು.

ಪಟ್ಟಣದ ತೋಟಗಾರಿಕೆ ಇಲಾಖೆ ಆವರಣದಲ್ಲಿ ತಾಲೂಕಾಡಳಿತ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ, ತಾಪಂ ಸಹಯೋಗದಲ್ಲಿ ಸೋಮವಾರ ಡಾ.ಬಿ.ಆರ್​.ಅಂಬೇಡ್ಕರ್​ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಪನ್ಯಾಸಕ ಆನಂದಕುಮಾರ ಜಕ್ಕಣ್ಣವರ ಮಾತನಾಡಿದರು. ಪುರಸಭೆ ಅಧ್ಯೆ ಶಿವಲೀಲಾ ಬುಟಾಳೆ, ಉಪಾಧ್ಯೆ ಭುವನೇಶ್ವರಿ ಯಂಕಚ್ಚಿ, ಸಿದ್ದಾರ್ಥ ಸಿಂಗೆ ಮಾತನಾಡಿದರು. ಪಿಯುಸಿಯಲ್ಲಿ ಹೆಚ್ಚು ಅಂಕಪಡೆದ ಎಸ್​ಸಿ, ಎಸ್​ಟಿ ವಿದ್ಯಾರ್ಥಿಗಳು ಮತ್ತು ಸಾಧಕರನ್ನು ಗೌರವಿಸಲಾಯಿತು. ತಹಸೀಲ್ದಾರ್​ ಸಿದರಾಯ ಭೋಸಗಿ, ತಾಪಂ ಇಒ ಶಿವಾನಂದ ಕಲ್ಲಾಪುರ, ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ, ಸಮಾಜ ಕಲ್ಯಾಣಾಧಿಕಾರಿ ಬಸವರಾಜ ಯಾದವಾಡ ಇತರರಿದ್ದರು.