ಜಿಲ್ಲೆ

ವಿಶ್ವಾರಾಧ್ಯ ಆಸ್ಪತ್ರೆಯಲ್ಲಿ ನಾಡಿದ್ದು ಕ್ಯಾನ್ಸರ್ ತಪಾಸಣಾ ಶಿಬಿರ

ಡಿ. ಎಂ. ಮಹೇಶ್

ದಾವಣಗೆರೆ: ಹೊರವಲಯದ ವಿಶ್ವ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮೇ 20ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಆಸ್ಪತ್ರೆಯ ಸರ್ಜನ್ ಡಾ.ಜಗದೀಶ್ ತುಬಚಿ ಹೇಳಿದರು.

ಶಿಬಿರದಲ್ಲಿ ಶಸ್ತ್ರಚಿಕಿತ್ಸೆ, ಕಿಮೋಥೆರಪಿ, ಆಧುನಿಕ ರೇಡಿಯೋ ಥೆರಪಿ ತಪಾಸಣೆ ಮಾಡಲಾಗುವುದು. ಕ್ಯಾನ್ಸರ್ ಪತ್ತೆಯಾದವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇದುವರೆಗೆ ನಾಲ್ಕು ಶಿಬಿರಗಳನ್ನು ನಡೆಸಲಾಗಿದ್ದು, ಪುರುಷರಲ್ಲಿ ಹೆಚ್ಚಾಗಿ ಬಾಯಿಕ್ಯಾನ್ಸರ್, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತಿದೆ. ಪ್ರಾರಂಭಿಕ ಹಂತದಲ್ಲೇ ಸೂಕ್ತ ಚಿಕಿತ್ಸೆ ನೀಡಿದರೆ ಕ್ಯಾನ್ಸರ್ ತಡೆಗಟ್ಟಬಹುದು ಎಂದು ಮಾಹಿತಿ ನೀಡಿದರು.

ಆಸ್ಪತ್ರೆಯಲ್ಲಿ ಕಿಮೋಥೆರಪಿ, ರೇಡಿಯೋಥೆರಪಿ, ಕ್ಯಾನ್ಸರ್ ಶಸ್ತ್ರಚಿಕಿತ್ಸೆ, ನೋವು ನಿವಾರಣಾ ಕ್ಲಿನಿಕ್, ಮಹಿಳಾ ಕ್ಯಾನ್ಸರ್ ರೋಗಿಗಳಿಗೆ ವಿಶೇಷ ಕ್ಲಿನಿಕ್ ಸೌಲಭ್ಯಗಳಿವೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಡಾ.ಅಜಯ್, ಆಡಳಿತಾಧಿಕಾರಿ ರಾಘವೇಂದ್ರ, ಮುಖ್ಯ ಸಂಯೋಜಕ ಡಾ.ವಿಶ್ವಾಸ್, ಮಂಜುನಾಥ ಇದ್ದರು.

--