ಸುಂಟಿಕೊಪ್ಪ: ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಪಡೆಯುವುದರೊಂದಿಗೆ, ದೈನಂದಿನ ವೃತ್ತಿ ಜೀವನಲ್ಲಿ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳುವಂತೆ ಲಯನ್ಸ್ ಸಂಸ್ಥೆಯ ಹಿರಿಯ ಸದಸ್ಯ ಎಂ.ಎ.ವಸಂತ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸುಂಟಿಕೊಪ್ಪ ಲಯನ್ಸ್ ಸಂಸ್ಥೆ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಗಣಕ ಯಂತ್ರ ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜ್ಞಾನ ದಿನದಿಂದ ದಿನಕ್ಕೆ ಮುಂದುವರಿಯುತ್ತಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪೂರಕವಾಗಿ ಕಂಪ್ಯೂಟರ್ ತರಬೇತಿ ಅವಶ್ಯಕವಾಗಿದೆ. ಇದನ್ನು ಮನಗಂಡು ನಮ್ಮ ಸಂಸ್ಥೆಯಿಂದ ಗಣಕ ಯಂತ್ರ ನೀಡಲಾಗಿ ಎಂದರು.
ಲಯನ್ಸ್ ಸಂಸ್ಥೆಯ ಹಿರಿಯ ಸದಸ್ಯ ಕೆ.ಡಿ.ರಾಮಯ್ಯ ಮಾತನಾಡಿ, ವಿದ್ಯಾರ್ಥಿಗಳು ಸ್ಮಾರ್ಟ್ ಫೋನ್ ಬಳಕೆಯಿಂದ ದೂರ ಸರಿದು ಕಂಪ್ಯೂಟರ್ ಜ್ಞಾನ ಪಡೆದು ನಿಜವಾದ ಸಾಕ್ಷರರೆನಿಸಿಕೊಳ್ಳಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಬರಲು ಕಂಪ್ಯೂಟರ್ ಜ್ಞಾನ ಅಗತ್ಯ ಎಂದರು.
ಲಯನ್ಸ್ ಸಂಸ್ಥೆಯ ಅಧ್ಯಕ್ಷ ಚಮ್ಮನ್ ಚಿಟ್ಟಿಯಪ್ಪ, ಕಾರ್ಯದರ್ಶಿ ಶಶಾಂಕ್, ಎಸ್.ಜಿ.ಶ್ರೀನಿವಾಸ್, ಶಶಿಕಾಂತ್, ಡಾ.ಯಶೋಧರ ಪೂಜಾರಿ, ಪೊನ್ನಪ್ಪ, ಎಂ.ಕೆ.ಪೆಮ್ಮಯ್ಯ, ಕಾಲೇಜ