ಧಾರವಾಡ: ನಗರದ ವೀರಶೈವ ಜಂಗಮ ಸಂಸ್ಥೆ ಹಾಗೂ ತಾಲೂಕಿನ ಬೆನಕನಕಟ್ಟಿ ಗ್ರಾಮಸ್ಥರಿಂದ ಕಾಶಿ ಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗತ್ಪಾದರ ಜನ್ಮ ಅಮೃತ ಮಹೋತ್ಸವದ ಅಂಗವಾಗಿ ಅವರಿಗೆ ಪಂಚಫಲಗಳ ತುಲಾಭಾರ ಕಾರ್ಯಕ್ರಮ ಮತ್ತು ಜಂಗಮ ಮಕ್ಕಳಿಗೆ ಹಮ್ಮಿಕೊಂಡಿದ್ದ ವೈದಿಕ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭವನ್ನು ಮೇ ೨೮ರಂದು ಮಧ್ಯಾಹ್ನ ೩ ಗಂಟೆಗೆ ಬೆನಕನಕಟ್ಟಿ ಗ್ರಾಮದ ಬೆನಕಪ್ಪನ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ಕಾಶಿ ಪೀಠದ ಕಾಶಿ ಜ್ಞಾನ ಸಿಂಹಾಸನಾಽÃಶ್ವರ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಧರ್ಮಸಭೆ ಜರುಗಿಸುವರು. ಹುಬ್ಬಳ್ಳಿ ನವನಗರದ ಕಾಶಿ ಖಾಸಾ ಶಾಖಾ ಮಠದ ಶ್ರೀ ರಾಜಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವೀರಶೈವ ಜಂಗಮ ಸಂಸ್ಥೆಯ ಉಪಾಧ್ಯಕ್ಷ ಮೃತುಂಜಯ ಎಸ್. ಕೋರಿಮಠ ಅಧ್ಯಕ್ಷತೆ ವಹಿಸುವರು.
ಅತಿಥಿಗಳಾಗಿ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ, ಜಗದ್ಗುರು ಪಂಚಾಚಾರ್ಯ ಮಾನವಧರ್ಮ ಸಂಸ್ಥೆಯ ಅಧ್ಯಕ್ಷ ಡಾ. ಎಸ್.ಆರ್. ರಾಮನಗೌಡರ, ಹಳ್ಳಿಗೇರಿಯ ಇಕೋ ವಿಲೇಜ್ ಮುಖ್ಯಸ್ಥ ಪಿ.ವಿ. ಹಿರೇಮಠ ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಂಘಟನೆಯ ಅಧ್ಯಕ್ಷ ಪ್ರಕಾಶ ಬೆಂಡಿಗೇರಿ, ಡಾ. ಸುರೇಶ ಹಿರೇಮಠ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.