ಜಿಲ್ಲೆ

ವ್ಯಕ್ತಿ ಅನುಮಾನಾಸ್ಪದ ಸಾವು

ಮೈಸೂರು: ತಾಲೂಕಿನ ಇಲವಾಲ ಹೋಬಳಿ ಸೀಗಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.

ಗ್ರಾಮದ ಹುಚ್ಚೇಗೌಡ ಅವರ ಪುತ್ರ ಮಹದೇವ(40) ಮೃತಪಟ್ಟವರು. ಇವರು ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಮದ್ಯಪಾನ ಮಾಡಿದ್ದಾರೆ. ನಂತರ ಮಹದೇವ ಅವರನ್ನು ಸ್ನೇಹಿತರು ಮನೆಗೆ ಕರೆತಂದು ಬಿಟ್ಟು ಹೋಗಿದ್ದಾರೆ.

ಶುಕ್ರವಾರ ಬೆಳಗ್ಗೆ ಮಲಗಿದ್ದ ರೀತಿಯಲ್ಲೇ ಮಹದೇವ ಅಸುನೀಗಿದ್ದಾರೆ. ಸಾವಿನ ಕುರಿತು ಶಂಕೆ ವ್ಯಕ್ತಪಡಿಸಿರುವ ಮೃತರ ಕುಟುಂಬದವರು, 4-5 ಜನರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಇಲವಾಲ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದೆ.