ಜಿಲ್ಲೆ

ವ್ಹೀಲಿಂಗ್ ಮಾಡುತ್ತಿದ್ದ ಅಪ್ರಾಪ್ತನ ಬಂಧನ

    ಹಾಸನ: ಸಾರ್ವಜನಿಕ ಸ್ಥಳದಲ್ಲಿ ಸ್ಕೂಟಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ 17 ವರ್ಷದ ಅಪ್ರಾಪ್ತನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ನಗರದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣಾ ನಿರೀಕ್ಷಕರಾದ ಟಿ.ಎಸ್.ಮಧು ಅವರು 80 ಅಡಿ ರಸ್ತೆಯ ರಾಜಕುಮಾರ್‌ನಗರದ ಬಳಿ ಭಾನುವಾರ ಸಂಜೆ ಗಸ್ತಿನಲ್ಲಿದ್ದ ಸಂದರ್ಭದಲ್ಲಿ ಸ್ಕೂಟಿಯ ಮುಂಭಾಗದ ಚಕ್ರವನ್ನು ಎತ್ತಿಕೊಂಡು ವ್ಹೀಲಿಂಗ್ ಮಾಡುತ್ತ, ಕಿರುಚುತ್ತ ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿದ್ದ ಅಪ್ರಾಪ್ತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೆನ್ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.