ಕಲಬುರಗಿ: ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯೂನಿಕೇಷನ್ ಇಂಜಿನಿಯರ್ಸ್ ಸಂಸ್ಥೆಯಿಂದ ಕೊಡಮಾಡುವ ರಾಷ್ಟ್ರೀಯ ಪ್ರಶಸ್ತಿಯನ್ನು ಶರಣಬಸವ ವಿಶ್ವವಿದ್ಯಾಲಯದ ಇಬ್ಬರು ಉನ್ನತ ಅಧಿಕಾರಿಗಳು ಬಾಚಿಕೊಂಡಿದ್ದು, ವಿವಿಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ.
೨೦೨೩ನೇ ಸಾಲಿನ ಮುಖ್ಯ ಪ್ರಶಸ್ತಿ ಪಡೆದವರಲ್ಲಿ ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ ಹಾಗೂ ಕುಲಸಚಿವ (ಮೌಲ್ಯಮಾಪನ) ಡಾ.ಬಸವರಾಜ ಮಠಪತಿ ಸೇರಿದ್ದಾರೆ.
ಎಲೆಕ್ಟಾನಿಕ್ಸ್ ಮತ್ತು ಟೆಲಿಕಮ್ಯೂನಿಕೇಷನ್ ಕ್ಷೇತ್ರಗಳಲ್ಲಿ ತಮ್ಮ ಶ್ರೇಷ್ಠತೆ ಪ್ರದರ್ಶಿಸುವ ವೃತ್ತಿಪರರು ಮತ್ತು ಸದಸ್ಯರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ನುರಿತ ಹಾಗೂ ಪ್ರಸಿದ್ಧ ಅಧಿಕಾರಿಗಳನ್ನೊಳಗೊಂಡ ತೀರ್ಪುಗಾರರ ತಂಡ ಆಯ್ಕೆ ಮಾಡಲಿದೆ. ತ್ರಿವೇಣಿದೇವಿ ಗುಪ್ತಾ ಸ್ಮಾರಕ ಪ್ರಶಸ್ತಿಯು ಡಾ.ಲಕ್ಷಿö್ಮ ಪಾಟೀಲ್ ಮಾಕಾ, ಯಶೋದಮ್ಮ ಮತ್ತು ಸಾರಸವಾಣಿ ಪ್ರಶಸ್ತಿ ಡಾ. ಬಸವರಾಜ ಮಠಪತಿಯವರಿಗೆ ಲಭಿಸಿದೆ.
ಸೆಪ್ಟೆಂಬರ್ ೧೫ ರಿಂದ ೧೭ರವರೆಗೆ ಪುಣೆ ನಗರದಲ್ಲಿ ನಡೆಯಲಿರುವ ವಾರ್ಷಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದೆ. ಪ್ರಶಸ್ತಿ ಪಡೆದ ಈ ಇಬ್ಬರು ಉನ್ನತ ಅಧಿಕಾರಿಗಳನ್ನು ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ ಹರಸಿ, ಆಶೀರ್ವದಿಸಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿವಿ ಕುಲಪತಿ ಡಾ.ನಿರಂಜನ್ ನಿಷ್ಠಿ ಶುಭಕೋರಿದ್ದಾರೆ.
ವಿವಿಯಲ್ಲಿ ನಡೆದ ಸಮಾರಂಭದಲ್ಲಿ ಡಾ.ಲಕ್ಷಿö್ಮ ಪಾಟೀಲ್ ಮಾಕಾ ಹಾಗೂ ಡಾ.ಬಸವರಾಜ ಮಠಪತಿಯವರನ್ನು ಸತ್ಕರಿಸಲಾಯಿತು. ಸಮಕುಲಪತಿ ಪ್ರೊ.ವಿ.ಡಿ.ಮೈತ್ರಿ, ಕುಲಸಚಿವ ಡಾ.ಅನಿಲಕುಮಾರ್ ಬಿಡವೆ, ಹಣಕಾಸು ಅಧಿಕಾರಿ ಪ್ರೊ.ಕಿರಣ್ ಮಾಕಾ, ಪತ್ರಿಕೋದ್ಯಮ ವಿಭಾಗದ ಡೀನ್ ಟಿ.ವಿ.ಶಿವಾನಂದನ್, ಭಾಷಾ ಅಧ್ಯಯನ ನಿಕಾಯದ ಡೀನ್ ಡಾ.ಎಸ್.ಜಿ.ಡೊಳ್ಳೆಗೌಡರ್ ಇತರರು ಪಾಲ್ಗೊಂಡಿದ್ದರು.