ಸೋಮವಾರಪೇಟೆ: ಶಾಂತಳ್ಳಿ ಕ್ಲಸ್ಟರ್ ಮಟ್ಟದ ವಿದ್ಯಾರ್ಥಿಗಳ ಕಲಿಕಾ ಹಬ್ಬಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಇತ್ತೀಚೆಗೆ ಚಾಲನೆ ನೀಡಿದರು.
ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೆಚ್ಚಿಸಲು ಸರ್ಕಾರ ಕಲಿಕಾ ಹಬ್ಬವನ್ನು ಕ್ಲಸ್ಟರ್ ಮಟ್ಟದಲ್ಲಿ ನಡೆಸುತ್ತಿದೆ. ಇಂತಹ ಕಾರ್ಯಕ್ರಮಗಳನ್ನು ಈ ಹಿಂದೆಯೇ ಪ್ರಾರಂಭಿಸಿದ್ದರೆ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿತ್ತು. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೇದಪ್ಪ ಸಲಹೆ ನೀಡಿದರು.
ಸಿಆರ್‌ಪಿ ಕಾಜೂರು ಸತೀಶ್, ಶಾಂತಳ್ಳಿ ಶಾಲಾ ಮುಖ್ಯ ಶಿಕ್ಷಕ ಎಚ್.ಎಂ.ಪರಮೇಶ್ವರಪ್ಪ, ಜಕ್ಕನಳ್ಳಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಚ್.ಸಿ.ಮನೋಹರ್, ತಲ್ತಾರ್‌ಶೆಟ್ಟಳ್ಳಿ ಶಾಲೆಯ ಮುಖ್ಯ ಶಿಕ್ಷಕ ಬಿ.ಎಂ.ಸತೀಶ್, ನಗರಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ರಮ್ಯಾ ಇತರರು ಇದ್ದರು.
22ಎಸ್‌ಪಿಟಿ2: ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬದಲ್ಲಿ ವಿದ್ಯಾರ್ಥಿಗಳಿಗೆ ಜಕ್ಕನಳ್ಳಿ ಶಾಲೆಯ ಮುಖ್ಯ ಶಿಕ್ಷಕ ಮನೋಹರ್ ಆಟಗಳನ್ನು ಹೇಳಿಕೊಡುತ್ತಿರುವುದು.