ಸೋಮವಾರಪೇಟೆ ಸಮೀಪದ ಶಾಂತಳ್ಳಿ-ಬೆಟ್ಟದಳ್ಳಿ ಶ್ರೀಕುಮಾರಲಿಂಗೇಶ್ವರ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ನೋಟ್ ಪುಸ್ತಕಗಳನ್ನು ವಿತರಿಸಿದರು. ಗೋಪಾಲ್, ಕಾರ್ಯಪ್ಪ, ವೀರಪ್ಪ, ಅರುಣ್, ಚಂಗಪ್ಪ ಇದ್ದರು.  
ಜಿಲ್ಲೆ

ಶಾಂತಳ್ಳಿಯಲ್ಲಿ ವಿದ್ಯಾರ್ಥಿ ವಸತಿನಿಲಯ ಸ್ಥಾಪನೆಗೆ ಕ್ರಮ

ಸೋಮವಾರಪೇಟೆ: ಶಾಂತಳ್ಳಿ-ಬೆಟ್ಟದಳ್ಳಿ ಶ್ರೀ ಕುಮಾರಲಿಂಗೇಶ್ವರ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಉಚಿತವಾಗಿ ಪುಸ್ತಕಗಳನ್ನು ವಿತರಿಸಿದರು.


ಮುಂದಿನ ದಿನಗಳಲ್ಲಿ ಶಾಂತಳ್ಳಿಯಲ್ಲಿ ವಿದ್ಯಾರ್ಥಿ ವಸತಿ ನಿಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಗ್ರಾಮೀಣ ಪ್ರದೇಶದ ಮಕ್ಕಳಿಗೂ ಆಂಗ್ಲಮಾಧ್ಯಮದ ಶಿಕ್ಷಣದ ಸೌಲಭ್ಯ ನೀಡಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಶ್ರೀ ಕುಮಾರಲಿಂಗೇಶ್ವರ ಆಂಗ್ಲಮಾಧ್ಯಮ ಶಾಲೆ ತೆರೆಯಲಾಗಿದ್ದು, ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಗರ್ವಾಲೆ, ಸೂರ್ಲಬ್ಬಿ ಭಾಗದಿಂದಲೂ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ವಸತಿ ಶಾಲೆಯನ್ನಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.


ವಿದ್ಯಾಸಂಸ್ಥೆ ಅಧ್ಯಕ್ಷ ಕೆ.ಕೆ.ಗೋಪಾಲ್, ಶಾಲಾ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಕಾರ್ಯಪ್ಪ, ಖಜಾಂಚಿ ವೀರಪ್ಪ, ನಿರ್ದೇಶಕರಾದ ಅರುಣ್ ಕೊತ್ನಳ್ಳಿ, ವೆಂಕಟೇಶ್, ಸಂಪತ್, ಟಿ.ಪಿ. ಚಂಗಪ್ಪ, ಶ್ರೀಕುಮಾರಲಿಂಗೇಶ್ವರ ಶಾಲೆ ಮುಖ್ಯಶಿಕ್ಷಕಿ ಉಷಾಕುಮಾರಿ, ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕಿ ಲೀಲಾವತಿ ಇದ್ದರು.


ಶ್ರೀ ಕುಮಾರಲಿಂಗೇಶ್ವರ ಪ್ರೌಢಶಾಲೆ, ಆಂಗ್ಲಮಾಧ್ಯಮ ಶಾಲೆ, ಬೆಟ್ಟದಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.