ಅಂಕಲಿ: ಸ್ಥಳೀಯ ಕೆಎಲ್‌ಇ ಸಂಸ್ಥೆಯ ಶ್ರೀಮತಿ ಶಾರದಾ ಕೋರೆ ಪ್ರೌಢ ಶಾಲೆಯಲ್ಲಿ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಸತ್ಕಾರ ಸಮಾರಂಭ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಚಿದಾನಂದ ಬಸಪ್ರಭು ಕೋರೆ ಸಕ್ಕರೆ ಕಾರ್ಖಾನೆ ಚಿಕ್ಕೋಡಿಯ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆಯವರು ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದ ಕುಮಾರಿ ರಮ್ಯಾ ಜಯಂತ ನಾಯಿಕ ಶೇ97.12 ಕುಮಾರಿ ಗಂಗಾ ಗಣಪತಿ ಬುಬನಾಳೆ ಶೇ 96.96, ದ್ವಿತೀಯ ಸ್ಥಾನ ಹಾಗೂ ಕುಮಾರಿ, ದಿವ್ಯಾ ಅಣ್ಣಪ್ಪಾ ಹಿರೆಕುರಬರ 96.16 ಗಳಿಸಿ ತೃತಿಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡುವುದರ ಜತೆಗೆ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿ ಹಾರೈಸಿದರು. ಈ ಸಂದರ್ಭದಲ್ಲಿ ಕೆಎಲ್‌ಇ ಸಂಸ್ಥೆಯ ಆಜೀವ ಸದಸ್ಯ ಬಿ.ಎಸ್ ಅಂಬಿ, ಉಪ ಪ್ರಾಚಾರ್ಯ ಜೆ.ಎಸ್. ತಮಗೊಂಡ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆರ್. ಸಿ. ಪಾಟೀಲ, ಪದವಿ ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಎ. ಕೆ. ಪಾಟೀಲ ಹಾಗೂ ಪ್ರೌಢ ಶಾಲೆಯ ಎಲ್ಲ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.