ಕಲಬುರಗಿ: ನಗರದ ಬ್ರಹ್ಮಪುರ ಬಡಾವಣೆಯ ಸುಭಾಷ ಚೌಕï ಬಳಿಯ ಗುರುಸ್ವಾಮಿ ಹಿರೇಮಠ ಅವರ ಬಸವ ಮೆಡಿಕಲ್ ಆ್ಯಂಡ್ ಜನರಲ್‌ಗೆ ಶುಕ್ರವಾರ ತಡರಾತ್ರಿ ಬೆಂಕಿ ತಗುಲಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ್ದು, ಮಳಿಗೆಯಲ್ಲಿನ ಸಂಪೂರ್ಣ ಫರ್ನಿಚರ್, ಔಷಧಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದ ಕೂಡಲೇ, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿz್ದÁರೆ. ಆರ್.ಜೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತನಿಖೆ ನಡೆಯುತ್ತಿದೆ.