ಶನಿವಾರಸಂತೆ ವಿಘ್ನೇಶ್ವರ ಗೋಲ್ಡನ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ತರಕಾರಿ, ತಿಂಡಿ ತಿನಿಸುಗಳನ್ನು ಮಾರಾಟ ಮಾಡಿದರು. ಶಿಕ್ಷಕರು, ಪಾಲಕರು ಹಾಜರಿದ್ದರು. 
ಜಿಲ್ಲೆ

ಶಾಲಾ ಆವರಣದಲ್ಲಿ ಮಕ್ಕಳ ಸಂತೆ

ಶನಿವಾರಸಂತೆ: ಸ್ಥಳೀಯ ವಿಘ್ನೇಶ್ವರ ಗೋಲ್ಡನ್ ಸ್ಕೂಲ್ ಶಾಲಾ ಆವರಣದಲ್ಲಿ ಶನಿವಾರ ಮಕ್ಕಳ ಸಂತೆ ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಬೆಳೆದ ತರಕಾರಿ, ಬಾಳೆಹಣ್ಣು, ಕಿತ್ತಳೆ, ಹಣ್ಣು ಸೇರಿದಂತೆ ಪಾಲಕರು ತಯಾರಿಸಿಕೊಟ್ಟ ತಿಂಡಿ, ತಿನಿಸುಗಳನ್ನು ಸಂತೆಯಲ್ಲಿ ವ್ಯಾಪಾರ ಮಾಡಿದರು. ಪಾಲಕರು ಮತ್ತು ಸಾರ್ವಜನಿಕರು ಮಕ್ಕಳ ವ್ಯಾಪಾರ, ವ್ಯವಹಾರದ ಚುರುಕುತನ ಕಂಡು ಬೆರಗಾದರು.

ಶಾಲೆಯ ಮುಖ್ಯ ಶಿಕ್ಷಕ ಷಣ್ಮುಖಯ್ಯ ಈ ಸಂದರ್ಭ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯೊಂದಿಗೆ ವ್ಯವಹಾರಿಕ ಜ್ಞಾನವನ್ನೂ ಹೊಂದಿರಬೇಕು. ಚಿಣ್ಣರಿಗೆ ಹಣಕಾಸು ಉಳಿತಾಯದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಮಕ್ಕಳ ಸಂತೆ ಆಯೋಜನೆ ಮಾಡಲಾಗಿದೆ ಎಂದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಟಿ.ಪಿ.ಶಿವಪ್ರಕಾಶ್, ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕ ಕೆ.ಪಿ.ಜಯಕುಮಾರ್ ಮಾತನಾಡಿದರು. ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬೆಳ್ಳಿಯಪ್ಪ, ಶಿಕ್ಷಕರು ಹಾಜರಿದ್ದರು.