ಮೈಸೂರು: ಶಾಲೆಗಳು ಎಲ್ಲ ಮಕ್ಕಳಿಗೂ ಸುರಕ್ಷಿತ ಸ್ಥಳವಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜವಹಾರ್ ನವೋದಯ ವಿದ್ಯಾಲಯದ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಗುಡ್ ಟಚ್ ಬ್ಯಾಡ್ ಟಚ್ ಕುರಿತು ತಿಳಿದಿರಬೇಕು. ವಿದ್ಯಾರ್ಥಿಗಳಿಗೆ ಹದಿಹರೆಯದವರ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಬೇಕು. ಪರಿಸರ ಸ್ನೇಹಿ ವಾತಾವರಣ ನಿರ್ಮಾಣ ಮಾಡಬೇಕು, ಹೊರಗಿನ ಸಂಪನ್ಮೂಲ ವ್ಯಕ್ತಗಳೊಡನೆ ಆಗಿಂದಾಗೆ ಸಂವಾದ, ಚರ್ಚೆಗಳನ್ನು ಏರ್ಪಡಿಸುವಂತೆ ಸಲಹೆ ನೀಡಿದರು.
ಶಾಲೆಗೆ 24 ನಿರಂತರ ವಿದ್ಯುತ್, ಶಾಲಾ ವಾಹನ, ಮಳೆ ನೀರು ಕೊಯ್ಲು, ಶಾಲೆಯಲ್ಲಿ ತ್ಯಾಜ್ಯ ನಿರ್ವಹಣೆ, 400ಮೀ. ಟ್ರಾೃಕ್, ಬಾಸ್ಕೆಟ್ ಬಾಲ್ ಮೈದಾನ, ಬಿಸಿ ನೀರಿನ ವ್ಯವಸ್ಥೆ ಹಾಗೂ 4 ಅಧಿಕ ತರಗತಿ ಕೊಠಡಿಗಳನ್ನು ನೀಡುವಂತೆ ಜಿಲ್ಲಾಧಿಕಾರಿಗೆ ಶಾಲೆ ಪ್ರತಿನಿಧಿಗಳು ಮನವಿ ಮಾಡಿಕೊಂಡರು.