ಜಿಲ್ಲೆ

ಶಾಲೆಯಲ್ಲಿ ಸಿಸಿ ಕ್ಯಾಮರಾ ಕಳವು

ಸೋಮವಾರಪೇಟೆ: ತಾಲೂಕಿನ ಐಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕಟ್ಟಡದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾವನ್ನು ಕಿಡಿಗೇಡಿಗಳು ಕಳವು ಮಾಡಿದ್ದಾರೆ. ಈ ಸಂಬಂಧ ಮುಖ್ಯಶಿಕ್ಷಕರು ಸೋಮವಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಾಲೆ ಸಮೀಪದ ಮೀಸಲು ಅರಣ್ಯ ಪ್ರದೇಶದಲ್ಲಿ ಅವ್ಯಾಹತವಾಗಿ ಮರ ಕಳ್ಳತನ ಹಾಗೂ ಸಾಗಣೆ ಪ್ರಕರಣ ನಡೆಯುತ್ತಿದ್ದು, ಅವರ ಮೇಲೂ ಸಂಶಯ ವ್ಯಕ್ತವಾಗಿದೆ.