ಚಿತ್ರದುರ್ಗ:ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸದಸ್ಯರು ನಗರದ ಜೆಸಿಆರ್ ಬಡಾವಣೆಯಲ್ಲಿರುವ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮನೆ ಮುಂದೆ ಸೆ.16ರಂದು ಬೆಳಗ್ಗೆ 11ಕ್ಕೆ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾ ನ ಬಿಡುಗಡೆಗೆ ಉದಾಸೀನ ತೋರುತ್ತಿರುವ ಕೇಂದ್ರ ಹಾಗೂ ರಾಜ್ಯಸರ್ಕಾರಗಳ ನಡೆ ಖಂಡಿಸಿ ಪ್ರತಿಭಟನೆ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ತಿಳಿಸಿದ್ದಾರೆ.