ಬೀರೂರು ಸಮೀಪದ ಬಳ್ಳಿಗನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿ ಸುವರ್ಣಾ ಎಸ್.ಒಡೆಯರ್ ಅವರನ್ನು ಸನ್ಮಾನಿಸಲಾಯಿತು. ಪ್ರಕಾಶ್, ಎಸ್.ದೇವರಾಜು, ಹರೀಶ್ ಇತರರಿದ್ದರು.  
ಜಿಲ್ಲೆ

ಶಿಕ್ಷಕ ವೃತ್ತಿ ದೇಶದ ಭವಿಷ್ಯ ರೂಪಿಸುವ ಶಕ್ತಿ

ಬೀರೂರು: ಉತ್ತಮ ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಅಂಥ ವತ್ತಿಯಲ್ಲಿ ಸಾಧನೆ ಮಾಡಿ ಜಿಲ್ಲೆಯಲ್ಲಿ ಉತ್ತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸುವರ್ಣ ಎಸ್.ಒಡೆಯರ್ ಬೀರೂರು ಶೈಕ್ಷಣಿಕ ವಲಯಕ್ಕೆ ಹಿರಿಮೆ ತಂದಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಚೋಪ್‌ದಾರ್ ಹೇಳಿದರು.

ಬಳ್ಳಿಗನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಶಿಕ್ಷಕಿ ಸುವರ್ಣ ಎಸ್. ಒಡೆಯರ್ ಅವರನ್ನು ಸನ್ಮಾನಿಸಿ ಮಾತನಾಡಿದರು. ಶಿಕ್ಷಕರು ಕರ್ತವ್ಯ ಅರಿತು ಕಾರ್ಯ ನಿರ್ವಹಿಸಿದರೆ ಪ್ರತಿಯೊಬ್ಬರೂ ಅತ್ಯುತ್ತಮ ಶಿಕ್ಷಕರ ಪಟ್ಟಿಗೆ ಸೇರಬಹುದು. ಗಣಿತ ಎಂಬುದು ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ ಇದ್ದಂತೆ. ಈ ವಿಷಯದಲ್ಲಿ ಮಕ್ಕಳಲ್ಲಿ ಆಸಕ್ತಿ ಬೆಳೆಸಿ ಗಮನ ಸೆಳೆದು ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದರು.

ಬಳ್ಳಿಗನೂರು ಗ್ರಾಪಂ ಸದಸ್ಯ ಪ್ರಕಾಶ್ ಮಾತನಾಡಿ, ಶಿಕ್ಷಕರು ಮನಸ್ಸು ಮಾಡಿದರೆ ದೇಶದ ಭವಿಷ್ಯವನ್ನೇ ಬದಲಿಸಬಹುದು. ಸರ್ಕಾರಿ ಶಾಲೆಯೆಂದರೆ ಮೂಗು ಮುರಿಯುವ ಇಂದಿನ ದಿನಮಾನಗಳಲ್ಲಿ ಇರುವ ಸೌಲಭ್ಯವನ್ನೇ ಬಳಸಿಕೊಂಡು ಉತ್ತಮ ಶಿಕ್ಷಣ ನೀಡುವುದರ ಜತೆಗೆ ಶೈಕ್ಷಣಿಕ ಗುಣಮಟ್ಟ ಸುಧಾರಿಸಬಹುದಾಗಿದೆ ಎಂದರು.

ಎಸ್‌ಡಿಎಂಸಿ ಸದಸ್ಯ ಎಸ್.ದೇವರಾಜು, ಗ್ರಾಪಂ ಸದಸ್ಯ ಹರೀಶ್, ನಿವತ್ತ ಶಿಕ್ಷಕ ವಿಜಯಕುಮಾರ್, ಮಲ್ಲಪ್ಪ, ಶಿಕ್ಷಕರಾದ ಕೆ.ಎಸ್.ಪುಷ್ಪಲತಾ, ಜಿ.ಟಿ.ಕುಸುಮಾ, ಕೆ.ಬಿ.ಸವಿತಾ, ಪಿ.ನೇತ್ರಾ, ಎಂ.ಜಯಶ್ರೀ ಮತ್ತು ಗ್ರಾಮಸ್ಥರು ಇದ್ದರು.