ಜಿಲ್ಲೆ

ಶಿಕ್ಷಕರು ನಾಗರಿಕತೆಯ ನಿರ್ಮಾತೃಗಳು

Yadgiri - Laxmikanth Kulkarni

ಯಾದಗಿರಿ: ಒಬ್ಬ ಶಿಲ್ಪಿ ಕಾಡಿನಲ್ಲಿದ್ದ ಕಗ್ಗಲ್ಲನ್ನು ಕೆತ್ತನೆ ಮಾಡಿ ಯಾವ ರೀತಿ ಸುಂದರ ಶಿಲೆಯನ್ನಾಗಿ ಮಾಡುತ್ತಾನೊ, ಅದೇ ರೀತಿ ಶಿಕ್ಷಕನಿಗೆ ವ್ಯಕ್ತಿಯ ಸರ್ವಾಂಗಿಣ ವ್ಯಕ್ತಿತ್ವ ರೂಪಿಸುವ ಶಕ್ತಿ ಇದೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅಭಿಪ್ರಾಯಪಟ್ಟರು.

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನಿಮಿತ್ತ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜಿಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಪ್ರಾಥಮಿಕ ಹಾಘೂ ಪ್ರೌಢಶಾಲಾ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಕರು ನಾಗರಿಕತೆಯ ನಿಮರ್ಾತೃಗಳಾಗಿದ್ದಾರೆ. ಮಕ್ಕಳಿಗೆ ವಿದ್ಯೆ ಕಲಿಸಿ, ಸರಿಯಾದ ಮಾರ್ಗದರ್ಶನ ಮಾಡುವ ಉನ್ನತ ಸ್ಥಾನವನ್ನು ಹೊಂದಿದ್ದಾರೆ ಎಂದರು.

ಶಿಕ್ಷಣ ಮನುಷ್ಯನಲ್ಲಿ ಈಗಾಗಲೇ ಇರುವ ಪರಿಪೂರ್ಣತೆಯ ಅಭಿವ್ಯಕ್ತಿಯಾಗಿದೆ ಎಂದು ಸ್ವಾಮಿ ವಿವೇಕಾನಂದರು ಹೇಳುತ್ತಾರೆ. ಸಮಾಜ ಮತ್ತು ರಾಷ್ಟ್ರವನ್ನು ರೂಪಿಸುವಲ್ಲಿ ಶಿಕ್ಷಕರು ವಹಿಸುವ ಪ್ರಮುಖ ಪಾತ್ರವನ್ನು ನೆನಪಿಸುವುದಕ್ಕಾಗಿ ಶಿಕ್ಷಕರ ದಿನ ಆಚರಣೆ ಮಾಡಲಾಗುತ್ತದೆ. ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿ, ಸರಿಯಾದ ಮಾರ್ಗದಲ್ಲಿ ನಡೆಯುವಂತೆ ಮಾಡಲು ಶಿಕ್ಷಕರ ಪಾತ್ರವೂ ಇದೆ ಎಂದು ಹೇಳಿದರು.

ಯಾದಗಿರಿ ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿಯುತ್ತಿರುವುದು ವಿಷಾಧನೀಯ ಸಂಗತಿ. ರ್ಸಕಾರಿ ಶಾಲೆಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು ನಾನು ಪ್ರಾಮಾಣಿಕವಾಗಿ ಸಹಕಾರ ನೀಡುತ್ತೇನೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ದೂರದೃಷ್ಟಿವುಳ್ಳವರಿದ್ದಾರೆ. ಕಳೆದ 7 ವರ್ಷದ ನಂತರ ಸ್ಥಳಿಯರಾದ ಶರಣಬಸಪ್ಪ ದರ್ಶನಾಪುರ ಉಸ್ತುವಾರಿ ಸಚಿವರಾಗಿದ್ದಾರೆ. ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಜಿಲ್ಲೆಯ 4 ಶಾಸಕರು ಸಹಕಾರ ನೀಡಲು ಸಿದ್ದರಿದ್ದೇವೆ ಎಂದು ಭರವಸೆ ನೀಡಿದರು.

ಅಲ್ಲದೆ, ಬರುವ ಶೈಕ್ಷಣಿಕ ವರ್ಷದಲ್ಲಾದರೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷಾ ಫಲಿತಾಂಶ ಸುಧಾರಣೆಯಾಗಲಿದೆ ಎಂಬ ಆಶಾಭಾವ ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಶಿಕ್ಷಕ ವರ್ಗ ಗಂಭಿರ ಚಿಂತನೆ ನಡೆಸುವ ಅಗತ್ಯವಿದೆ ಎಂದು ತಿಳಿಸಿದರು.

ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಶೈಕ್ಷಣಿಕ ಕ್ಷೇತ್ರ ಸದೃಢವಾದಾಗ ಮಾತ್ರ ಜಿಲ್ಲೆ ಸಮಗ್ರ ಅಭಿವೃದ್ಧಿ ಹೊಂದಲು ಸಾಧ್ಯ. ಈಗಾಗಲೇ ನಾವು ಸರಕಾರಿ ಮೆಡಿಕಲ್ ಕಾಲೇಜು ಹೊಂದಿದ್ದೇವೆ. ಆದರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಿಂದೆ ಬಿದ್ದಿದ್ದೇವೆ. ಹೀಗಾಗಿ ಸಮಸ್ಯೆ ಮೂಲ ತಿಳಿದು ಅದಕ್ಕೆ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.