ಜಿಲ್ಲೆ

ಶಿಕ್ಷಣ ಕೊಡಿಸುವ ಹೊಣೆ ಪಾಲಕರ ಮೇಲಿದೆ

ಚಿತ್ರದುರ್ಗ:ಮಹಿಳೆಯರ ಸ್ವಾವಲಂಬಿ ಬದುಕಿಗಾಗಿ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆರವರು ಸ್ವ-ಸಹಾಯ ಸಂಘಗಳನ್ನು ಸ್ಥಾ ಪಿಸಿದ್ದಾರೆ ಎಂದು ಜಿಪಂ ಕೆಡಿಪಿ ಸದಸ್ಯ ಸಿ.ಬಿ.ನಾಗರಾಜ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಚಿತ್ರದು ರ್ಗದಿಂದ ವಾಸವಿ ವಿದ್ಯಾಸಂಸ್ಥೆಯಲ್ಲಿ ಸೋಮವಾರ ಏರ್ಪಡಿಸಿದ್ದ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣೆ ಕಾರ‌್ಯಕ್ರಮ ಉ ದ್ಘಾಟಿಸಿ ಅವರು ಮಾತನಾಡಿ,ಸ್ವ-ಸಹಾಯ ಸಂಘಗಳಿಂದ ಸಾಲ ಪಡೆದವರು ಸಕಾಲಕ್ಕೆ ಸರಿಯಾಗಿ ಸಾಲ ಮರು ಪಾವತಿಸಿ ಜೀವನ ಮಟ್ಟ ಸುಧಾರಿಸಿಕೊಳ್ಳಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಹೊಣೆಗಾರಿಕೆ ಪಾಲಕರ ಮೇಲಿದೆ ಎಂದರು.
ಮಂಜೂರಾತಿ ಪತ್ರ ವಿತರಿಸಿದ ಡಿಡಿಪಿಐ ಮಂಜುನಾಥ,ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡಿದರು. ವಾಸವಿ ವಿದ್ಯಾ ಸಂಸ್ಥೆ ಅಧ್ಯಕ್ಷ ಸತ್ಯನಾರಾಯಣಶೆಟ್ಟಿ,ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಕೆ.ಆರ್.ಮಂಜುನಾಥ್,ಸದಸ್ಯರಾದ ರೂಪಾಜನಾರ್ಧನ್,ರಾಜು ನಾಯಕ್,ನಾಗರಾಜ್‌ಸಂಗಮ್, ಮಹಮದ್ ನೂರುಲ್ಲಾ,ಕಿರಣ್‌ಶಂಕರ್,ಶಾಂತಾಅಶೋಕ್,ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ,ಬಿ.ಅಶೋಕ್,ರವಿಚಂದ್ರನ್ ಇದ್ದರು.