ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಪೀಪಲ್ಸ್ ಫಾರ್ ಕರ್ನಾಟಕ ಎಜುಕೇಶನ್ ವತಿಯಿಂದ ಸೆ. 16ರಂದು ಸಂಜೆ 5 ಗಂಟೆಗೆ ಇಲ್ಲಿನ ದಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಭವನದಲ್ಲಿ ಶಿಕ್ಷಣ ತಜ್ಞರ ವಿಶೇಷ ಸಭೆ ಆಯೋಜಿಲಸಾಗಿದೆ ಎಂದು ಸಿಂಡಿಕೇಟ್ ಮಾಜಿ ಸದಸ್ಯ ಸುಧೀಂದ್ರ ದೇಶಪಾಂಡೆ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಶ್ರೀ ಕೃಷ್ಣದೇವರಾಯ ವಿವಿಯ ವಿಶ್ರಾಂತ ಕುಲಪತಿ ಪ್ರೊ. ಸಿದ್ದು ಆಲ್ಗೂರ, ಮಾಧ್ಯಮಿಕ ಶಿಕ್ಷಕ ಸಂಘದ ಕಾರ್ಯಾಧ್ಯಕ್ಷ ಅರುಣ ಶಹಾಪುರ ವಕ್ತಾರರಾಗಿ ಆಗಮಿಸಲಿದ್ದಾರೆ. ರಾಣಿ ಚನ್ನಮ್ಮ ವಿವಿ ವಿಶ್ರಾಂತ ಕುಲಪತಿ ಪ್ರೊ. ಶಿವಾನಂದ ಹೊಸಮನಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಿದ್ದು ಪ್ರಶಂಸಾರ್ಹ. ಇಡೀ ದೇಶದಲ್ಲಿ ಕರ್ನಾಟಕವು ಅದನ್ನು ಮೊದಲ ಬಾರಿಗೆ ಜಾರಿಗೊಳಿಸಿದ ರಾಜ್ಯ ಎಂಬ ಹೆಮ್ಮಗೆ ಪಾತ್ರವಾಗಿದೆ. ಇಂತಹ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಹಂತದಲ್ಲೇ ಪ್ರಸಕ್ತ ರಾಜ್ಯ ಸರ್ಕಾರ ರದ್ದುಗೊಳಿಸುತ್ತಿರುವುದು ಪೂರ್ವಾಗ್ರಹ ಪೀಡಿತವಾಗಿದೆ ಎಂದರು.
ರಾಜ್ಯ ಸರ್ಕಾರದ ನಿರ್ಧಾರ ಶಿಕ್ಷಣ ವಿರೋಧಿಯಾಗಿದೆ. ಎನ್‌ಇಪಿ ರದ್ದಿ ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಹಾಗೂ ಇದರ ಪರಿಣಾಮಗಳ ಬಗ್ಗೆ ಅವಲೋಕಿಸುವ ನಿಟ್ಟಿನಲ್ಲಿ ಈ ಸಭೆ ಆಯೋಜಿಸಲಾಗಿದೆ ಎಂದು.
ವಿನಾಯಕ ಜೋಶಿ, ಪ್ರತೀಕ ಮಾಳಿ, ಇತರರು ಇದ್ದರು.