ಬೆಳಗಾವಿ: ವಿದ್ಯಾರ್ಥಿಗಳಿಂದ ಶಿಕ್ಷಕರ ಅಸ್ತಿತ್ವ ನಿರ್ಧಾರವಾಗುತ್ತದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಾಮಚಂದ್ರಗೌಡ ಹೇಳಿದ್ದಾರೆ.
ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಟಕ ಮಹಾವಿದ್ಯಾಲಯದ ಐಕ್ಯುಎಸಿ ಮತ್ತು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಐಕ್ಯುಎಸಿ ಸಂಯುಕ್ತಾಶ್ರಯದಲ್ಲಿ ನ್ಯಾಕ್ ಮಾನ್ಯತಾ ಪ್ರಕ್ರಿಯೆಯ ಕುರಿತು ಸೋಮವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಜಗತ್ತು ಇಂದು ವೇಗವಾಗಿ ಬದಲಾಗುತ್ತಿದೆ. ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಅವಶ್ಯಕತೆಯೂ ಇದೆ. ನಮ್ಮ ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಸುಧಾರಣೆಯಾಗದ ಹೊರತು ಉತ್ತಮ ಫಲಿತಾಂಶ ನಿರೀೆ ಸಾಧ್ಯವಿಲ್ಲ. ಉನ್ನತ ಶಿಕ್ಷಣ ಸುಧಾರಣೆ ಮತ್ತು ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ನ್ಯಾಕ್ ಮಾನ್ಯತೆ ಪಡೆದುಕೊಳ್ಳುವ ಅವಶ್ಯಕತೆ ಇದೆ. ನಮ್ಮ ಮಹಾವಿದ್ಯಾಲಯವು ನ್ಯಾಕ್ ಮಾನ್ಯತೆ ಪಡೆದುಕೊಳ್ಳುವುದರ ಮೂಲಕ ಭೌತಿಕ ಮತ್ತು ಬೌದ್ಧಿಕವಾಗಿ ಒಂದು ಮಾದರಿ ಮಹಾವಿದ್ಯಾಲಯವಾಗಲಿದೆ. ಆ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಬಹುದಾಗಿದೆ ಎಂದರು. ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ ವಿಶೇಷ ಅಧಿಕಾರಿ ಡಾ.ಎಂ.ಜಯಪ್ಪ ಮಾತನಾಡಿ, ಉನ್ನತ ಶಿಕ್ಷಣ ಸಂಸ್ಥೆಯ ಸಮಗ್ರ ಅಭಿವೃದ್ಧಿಗೆ ನ್ಯಾಕ್ ಮಾನ್ಯತೆ ಪಡೆದುಕೊಳ್ಳಬೇಕು. ನಮ್ಮ ದೇಶದಲ್ಲಿರುವ ವಿಶ್ವವಿದ್ಯಾಲಯಗಳಲ್ಲಿ ಶೇ.35 ಮತ್ತು ಮಹಾವಿದ್ಯಾಲಯಗಳಲ್ಲಿ ಶೇ.19.5 ಮಾತ್ರ ನ್ಯಾಕ್ ಮಾನ್ಯತೆ ಪಡೆದುಕೊಂಡಿವೆ.
ಇದು ನಮ್ಮ ಶಿಕ್ಷಣ ಸಂಸ್ಥೆಗಳ ಸ್ಥಿತಿ&ಗತಿಯನ್ನು ಸೂಚಿಸುತ್ತದೆ. ಸರ್ಕಾರ ಮತ್ತು ಯುಜಿಸಿಯ ಧನಸಹಾಯ ಪಡೆದುಕೊಳ್ಳಲು ಸಂಸ್ಥೆಯು ನ್ಯಾಕ್ ಮಾನ್ಯತೆ ಪಡೆದುಕೊಳ್ಳಲೇಬೇಕು ಎಂದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವ ಪ್ರೊ.ಶಿವಾನಂದ ಗೋರನಾಳೆ, ವಿಶ್ವವಿದ್ಯಾಲಯದ ಅಪರಾಧ ಮತ್ತು ನ್ಯಾಯಿಕ ಅಪರಾಧ ಶಾಸ ವಿಭಾಗದ ನಿರ್ದೇಶಕ ಪ್ರೊ.ಆರ್.ಎನ್.ಮನಗೂಳಿ, ಪ್ರಾಚಾರ್ಯ ಡಾ.ಶಂಕರ ಎಸ್. ತೇರದಾಳ, ಡಾ.ಮಲ್ಲೇಶ ದೊಡ್ಡಲಕ್ಕಣ್ಣವರ, ಡಾ.ಜ್ಯೋತಿ ಪಾಟೀಲ, ವಿದ್ಯಾರ್ಥಿ ಲಕ್ಷ$್ಮಣ ನಾಯ್ಕ, ಮಹಾವಿದ್ಯಾಲಯದ ಐಕ್ಯುಎಸಿ ಸಂಯೋಜಕ ಬಾಲಾಜಿ ಆಳಂದೆ, ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.