ಮೈಸೂರು: ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (ಆರ್‌ಎಲ್‌ಎಚ್‌ಪಿ) ಹಾಗೂ ಕ್ಲುಬರ್ ಲುಬ್ರಿಕೇಶನ್‌ನಿಂದ ಮೈಸೂರು ತಾಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿ ವಿತರಿಸಲಾಯಿತು.
ಶಿಕ್ಷಣ ಇಲಾಖೆ ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಶಿವಮೂರ್ತಿ ಮಾತನಾಡಿ, ಶಿಕ್ಷಣ ಪಡೆಯುವುದು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಯಾವುದೇ ಮಕ್ಕಳು ಶಾಲೆಯಿಂದ ಹೊರಗೆ ಉಳಿಯಬಾರದು. ಈ ನಿಟ್ಟಿನಲ್ಲಿ ಎಲ್ಲರಿಗೂ ಶಿಕ್ಷಣ ದೊರೆಯುವಂತೆ ಮಾಡಬೇಕು ಎಂದು ತಿಳಿಸಿದರು.
ಮಕ್ಕಳಿಗೂ ಶಾಲಾ ಬ್ಯಾಗ್, ನೋಟ್‌ಬುಕ್, ಪೆನ್ಸಿಲ್ ಸೇರಿದಂತೆ ಇತರ ಶೈಕ್ಷಣಿಕ ಸಾಮಗ್ರಿ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದು ಹೇಳಿದರು.
ಆರ್‌ಎಲ್‌ಎಚ್‌ಪಿ ಸಂಸ್ಥೆ ನಿರ್ದೇಶಕಿ ಸರಸ್ವತಿ, ಕಾರ್ಯದರ್ಶಿ ಪ್ರೊ. ಜೋಸ್, ಶಿಕ್ಷಣ ಸಂಯೋಜಕ ಶಿವಕುಮಾರ ಆರಾಧ್ಯ, ಬಿಆರ್‌ಸಿ ಶಿವಣ್ಣ, ಸಿಆರ್‌ಸಿ ಚಂದ್ರಶೇಖರ್, ಮುಖ್ಯಶಿಕ್ಷಕಿ ವಸಂತಾ, ಮುಖಂಡರಾದ ಗಂಗಪ್ಪ ಇತರರು ಇದ್ದರು.