ಜಿಲ್ಲೆ

ಶಿಕ್ಷಣದಿಂದಲೇ ಸ್ತ್ರೀ ಸಾಧನೆ ಸಾಧ್ಯ

ಕಲಬುರಗಿ: ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಪ್ರಾಬಲ್ಯ ಮೆರೆಯುತ್ತಿದ್ದು, ಹಲವಾರು ಕ್ಷೇತ್ರಗಳಲ್ಲಿ ತಮ್ಮ ಕಾರ್ಯಕ್ಷಮತೆ ಮೂಲಕ ವಿನೂತನ ಸಾಧನೆ ತೋರುತ್ತಿದ್ದಾರೆ. ಶಿಕ್ಷಣದಿಂದಲೇ ಮಹಿಳೆಯರು ರಾಷ್ಟç, ಅಂತಾರಾಷ್ಟಿçÃಯ ಮಟ್ಟದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಹೇಳಿದರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಶಿಕ್ಷಣದಿಂದಲೇ ಸರ್ವತೋಮುಖದ ಅಭಿವೃದ್ಧಿ ಸಾಧ್ಯ. ಪ್ರತಿ ಮಹಿಳೆಯು ಶಿಕ್ಷಣ ಪಡೆಯುವುದು ಅತೀ ಮುಖ್ಯ. ಮಹಿಳೆಯರು ನಿಗಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿರ್ವಾಹಕ ಮತ್ತು ಚಾಲಕ ಹುದ್ದೆಗೆ ನೇಮಕವಾಗಬೇಕು ಎಂದು ಸಲಹೆ ನೀಡಿದರು.

ಡಾ.ಅಶ್ವಿನಿಕುಮಾರಿ ಧನವಡಕರ್ ಮಾತನಾಡಿ, ಮಹಿಳೆಯರು ದೈನಂದಿನ ಕೆಲಸ ಕಾರ್ಯಗಳೊಂದಿಗೆ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.

ಸೇಡA ತಾಲೂಕಿನ ಬಟಗೇರಾ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಗುರು ರಾಜಶ್ರೀ ಮಾತನಾಡಿ, ಪ್ರಸ್ತುತ ಜಗತ್ತಿನಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಕೊಡುಗೆ ನೀಡುತ್ತಿದ್ದು, ಮಹಿಳೆಯರು ಶಿಕ್ಷಣದತ್ತ ಗಮನ ಹರಿಸಬೇಕು. ತೊಟ್ಟಿಲು ತೂಗಿದ ಕೈ ದೇಶವನ್ನೇ ಆಳುವ ಶಕ್ತಿ ಹೊಂದಿದೆ ಎಂದರು. ನಿಗಮದ ಎಲ್ಲ ಇಲಾಖೆ ಮುಖ್ಯಸ್ಥರು, ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.