ಬಾಗಲಕೋಟೆ: ನಮ್ಮ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನಡೆಸುವ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವದರಿಂದ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ. ಬೇಸಿಗೆ ಶಿಬಿರವು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಸ್.ಎಸ್.ದಳವಾಯಿ ಹೇಳಿದರು.
ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಆಶ್ರಯದಲ್ಲಿ ಶುಕ್ರವಾರ ಮೂರು ದಿನಗಳ ಕಾಲ ನಡೆಯುವ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರೋರ‍್ಸ್ ಮತ್ತು ರೇಂರ‍್ಸ್ಗಳು ಪರಿಸರ ಸಂರಕ್ಷಣೆ ಮಾಡುವ ಸಂಕಲ್ಪ ಮಾಡಿ, ನಮ್ಮ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನಿಯಮಗಳು ತಪ್ಪದೇ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಮಾತನಾಡಿ, ನಮ್ಮ ಪದವಿ ವಿದ್ಯಾರ್ಥಿಗಳಿಗೆ ಶಿಬಿರಗಳು ಉತ್ತಮ ನಡುವಳಿಕೆ ಕಲಿಸುತ್ತೇವೆ. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರತಿಜ್ಞಾ ವಿಽಯಂತೆ ವಿದ್ಯಾರ್ಥಿಗಳು ದೇವರು ಮತ್ತು ದೇಶ ಸೇವೆ ಮಾಡುವ ಮನೋಭಾವ ಬೆಳೆಸಿಕೊಂಡು, ಸಮಾಜ ಸೇವೆಯ ಮೂಲಕ ತಮ್ಮಲ್ಲಿ ನಂಬಿಕೆ ಮತ್ತು ವಿಶ್ವಾಸ ಗಳಿಸಲು ಸಾಧ್ಯವಿದೆ ಎಂದು ಹೇಳಿದರು.
ಜಿಲ್ಲಾ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಚಾಲಕ ಪ್ರಮೋದ ಚೌಗಲೆ ಮಾತನಾಡಿ, ಪ್ರತಿ ವರ್ಷ ನಡೆಸುವ ಬೇಸಿಗೆ ಶಿಬಿರಗಳಿಂದ ವಿದ್ಯಾರ್ಥಿಗಳು ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳಲು ಪೂರಕವಾಗಿದ್ದು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದÀಲ್ಲಿ ಪ್ರತಿಶತ ಶೇ.೫ ರಷ್ಟು ಮೀಸಲಾತಿಯನ್ನು ನೀಡಲಾಗುತ್ತಿದೆ. ರೇಂಜರ್ಸ್, ರೋವರ್ಸ್ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ತಮ್ಮ ಕರ್ತವ್ಯಗಳನ್ನು ಮತ್ತು ಜವಾಬ್ದಾರಿಗಳನ್ನು ಸರಿಯಾಗಿ ಅರಿತುಕೊಂಡರೆ ಸುಂದರ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ರೋರ‍್ಸ್ ಸ್ಕೌಟ್ಸ್ ಲೀಡರ್ ರವಿ ಗಡದನ್ನವರ ಅವರು ಅಳತೆ ಮತ್ತು ಅಂದಾಜು ಮಹತ್ವ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ರೋರ‍್ಸ್ ಲೀಡರ್ ಪ್ರೊ.ಪರಸಪ್ಪ ತಳವಾರ ಪ್ರಾಸ್ತಾವಿಕ ನುಡಿ ಹೇಳಿದರು. ರೇಂರ‍್ಸ್ ಲೀಡರ್ ಡಾ.ಸುಮಂಗಲಾ ಮೇಟಿ, ರೋರ‍್ಸ್ ಲೀಡರ್ ಡಾ.ಚಂದ್ರಶೇಖರ ಕಾಳನ್ನವರ, ರೇಂರ‍್ಸ್ ಲೀಡರ್ ಪ್ರೊ.ಸವಿತಾ ಬದಾಮಿ, ಸುಮಿತ್ರಾ ಕಾಂಬೊಜಿ ಉಪಸ್ಥಿತರಿದ್ದರು.