????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ಶಿವಕುಮಾರ ಸ್ವಾಮೀಜಿ ಆದರ್ಶ ಮೈಗೂಡಿಸಿಕೊಳ್ಳಲಿ

ಹನೂರು: ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ ಆದರ್ಶ ಹಾಗೂ ಬದುಕಿನ ಚಿಂತನೆಗಳು ಇಂದಿಗೂ ಜೀವಂತ. ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ತಾಲೂಕು ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಸೋಮಶೇಖರ್ ಹೇಳಿದರು.

ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಮಂಗಳವಾರ ಆಯೋಜಿಸಿದ್ದ ಡಾ.ಶಿವಕುಮಾರ ಸ್ವಾಮೀಜಿ ಅವರ 6ನೇ ವರ್ಷದ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. 12ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಕಾಯಕವೇ ಕೈಲಾಸ ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಡಾ.ಶಿವಕುಮಾರ ಸ್ವಾಮೀಜಿ ಅವರು 1930ರಲ್ಲಿ ಸಿದ್ಧಗಂಗಾ ಮಠದ ಜವಾಬ್ದಾರಿಯನ್ನು ಹೊತ್ತರು. ಮಠದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದರ ಜತೆಗೆ ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗದೆ ಎಲ್ಲ ಧರ್ಮಗಳ ಹಾಗೂ ಸಮಾಜದ ಏಳಿಗೆಗೆ ಶ್ರಮಿಸಿದ್ದರು. ದೇಶ ಹಾಗೂ ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯನ್ನು ಹೊಂದಿದ್ದ ಶ್ರೀಗಳು ಮುಂದಿನ ಪೀಳಿಗೆಯ ಬೆಳವಣಿಗೆಗೆ ಪಣ ತೊಟ್ಟಿದ್ದರು. ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವುದರ ಜತೆಗೆ ಮಠದಲ್ಲಿ ಆಶ್ರಯ ನೀಡಿ ಬಡ ಮಕ್ಕಳಿಗೆ ಆಶ್ರಯದಾತರಾಗಿದ್ದರು. ತ್ರಿವಿಧ ದಾಸೋಹವನ್ನು ನಡೆಸುತ್ತಾ ಬಂದಿದ್ದು, ವಿಶ್ವವ್ಯಾಪಿ ಜನಮನ್ನಣೆ ಗಳಿಸಿದ್ದರು. ಶ್ರೀಗಳು ನಮ್ಮನ್ನೆಲ್ಲ ಅಗಲಿ 6 ವರ್ಷಗಳೇ ಕಳೆದಿದ್ದರೂ ಅವರ ಆರ್ದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪ. ಜತೆಗೆ ಯುವಪೀಳಿಗೆಗೆ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಅಂತಾರಾಷ್ಟ್ರೀಯ ಖೋ, ಖೋ ಪಂದ್ಯದಲ್ಲಿ ಪಾಲ್ಗೊಂಡಿದ್ದ ತಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದ ಚೈತ್ರಾ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಪ್ರಮುಖರಾದ ಗುರುಮಲ್ಲಪ್ಪ, ನಾಗೇಂದ್ರಮೂರ್ತಿ, ವೃಷಭೇಂದ್ರಸ್ವಾಮಿ, ಮಾದಪ್ಪ, ಕಣ್ಣೂರು ನಾಗೇಂದ್ರ, ಮಂಗಲ ಕುಮಾರ್, ಅಲಗಾಪುರ ಮಹೇಶ್, ಮಾದಪ್ಪ, ಮೋಹನ್, ಜಗದೀಶ್, ಜಡೇಸ್ವಾಮಿ, ಸದಾಶಿವಮೂರ್ತಿ, ಬಸವರಾಜು, ವಿನೋದ್‌ಕುಮಾರ್ ಇತರರು ಇದ್ದರು.