ಜಿಲ್ಲೆ

ಶಿವಾಜಿ ಜಯಂತಿ ಪೂರ್ವಭಾವಿ ಸಭೆ 7ರಂದು

ಹುಬ್ಬಳ್ಳಿ: ಫೆಬ್ರವರಿ 19ರಂದು ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ತಾಲೂಕು ಆಡಳಿತದಿಂದ ಇಲ್ಲಿಯ ತಹಸೀಲ್ದಾರ್ ಕಚೇರಿಯಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಫೆ. 7ರಂದು ಸಂಜೆ 4 ಗಂಟೆಗೆ ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರು, ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಾಗಬೇಕೆಂದು ಹುಬ್ಬಳ್ಳಿ ಶಹರ ತಹಸೀಲ್ದಾರ್ ಕಲಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.