ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದ ಕಾಗವಾಡ ಶಿವಾನಂದ ಮಹಾವಿದ್ಯಾಲ ಯದ ಕ್ರೀಡಾಪಟುಗಳೊಂದಿಗೆ ದೈಹಿಕ ಶಿಕ್ಷಣ ನಿರ್ದೇಶಕ ಅಮರ ಕೊರವಿ, ಪ್ರಾಚಾರ್ಯರಾದ ಡಾ.ಎಸ್.ಎ.ಕರ್ಕಿ, ಪ್ರೊ.ಪಿ.ಬಿ.ನಂದಾಳೆ ಇದ್ದಾರೆ. 
ಜಿಲ್ಲೆ

ಶಿವಾನಂದ ಕಾಲೇಜು ಸಮಗ್ರ ವೀರಾಗ್ರಣಿ

ಕಾಗವಾಡ: ತಾಲೂಕಿನ ಐನಾಪುರ ಪಟ್ಟಣದ ಕೆಆರ್‌ಇಎಸ್ ಮೈದಾನದಲ್ಲಿ ಈಚೆಗೆ ಏರ್ಪಡಿಸಿದ್ದ ತಾಲೂಕುಮಟ್ಟದ ಕ್ರೀಡಾಕೂಟದಲ್ಲಿ ಕಾಗವಾಡ ಶಿವಾನಂದ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.

28 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 20 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ, 5 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದು ಕಾಲೇಜಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ತಂದುಕೊಟ್ಟಿದ್ದಾರೆ. ಕ್ರೀಡಾಪಟುಗಳು ಹಾಗೂ ಮಾರ್ಗದರ್ಶನ ಮಾಡಿದ ದೈಹಿಕ ಶಿಕ್ಷಣ ನಿರ್ದೇಶಕ ಅಮರ ಕೊರವಿ ಅವರನ್ನು ಆಡಳಿತ ಮಂಡಳಿ, ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಎ.ಕರ್ಕಿ ಮತ್ತು ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ.ಪಿ.ಬಿ.ನಂದಾಳೆ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.