ಬೆಳಗಾವಿ: ಬೆಳಗಾವಿ ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ 286ನೇ ಶಿವಾನುಭವ ಹಾಗೂ ವಿಶ್ವಗುರು ಬಸವಣ್ಣನವರ ಜಯಂತಿ ಮಹೋತ್ಸವ ಮೇ 5ರಂದು ಸಂಜೆ 6 ಗಂಟೆಗೆ ನಡೆಯಲಿದೆ. ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಡಾ. ಗುರುಪಾದ ಘಿವಾರಿ ಅಧ್ಯಕ್ಷತೆ ವಹಿಸುವರು. ರಾಜಶೇಖರ ಪಾಟೀಲ ಅವರು ‘ಬಸವಣ್ಣನವರ ವೈಜ್ಞಾನಿಕ ನಿಲುವು’ ವಿಷಯ ಕುರಿತು ಉಪನ್ಯಾಸ ನೀಡುವರು. ಇದೇ ವೇಳೆ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ.
ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳು ಪ್ರಾರ್ಥನಾ ಗೀತೆ ಹಾಡುವರು ಎಂದು ಪ್ರಕಟಣೆ ತಿಳಿಸಿದೆ.