ಮದ್ದೂರು ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಶಾಸಕ ಡಿ.ಸಿ.ತಮ್ಮಣ್ಣ ಅಧಿಕಾರಿಗಳೊಂದಿಗೆ ಆಗಮಿಸಿ ಪರಿಶೀಲನೆ ಮಾಡಿದರು. 
ಜಿಲ್ಲೆ

ಶೀಘ್ರ ಪರಿಹಾರ ವಿತರಣೆಗೆ ಕ್ರಮ

ಮದ್ದೂರು: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಡಿ.ಸಿ.ತಮ್ಮಣ್ಣ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಶನಿವಾರ ಆಗಮಿಸಿ ಪರಿಶೀಲನೆ ನಡೆಸಿದರು.

ನಷ್ಟವಾಗಿರುವ ವಿವಿಧ ಬೆಳೆಗಳ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳು ಸರ್ವೇ ನಡೆಸಿ ಶೀಘ್ರವಾಗಿ ಸರ್ಕಾರದಿಂದ ಪರಿಹಾರ ಬರುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆ ನೀರಿಗೆ ಕೊಚ್ಚಿ ಹೋಗಿರುವ ನಿಡಘಟ್ಟ-ತಿಪ್ಪೂರು ಮಾರ್ಗದ ಸಂಪರ್ಕ ಸೇತುವೆ ಕಾಮಗಾರಿ ಶೀಘ್ರವಾಗಿ ಆರಂಭಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು. ಮಳೆಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ತಾಲೂಕು ಮಟ್ಟದ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಚ್.ಸಿ.ಮಹದೇವಪ್ಪ, ಇತರ ಇಲಾಖೆಗಳ ಅಧಿಕಾರಿಗಳು ಇದ್ದರು.