ಹಾಸನ: ಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಈಗಾಗಲೇ ಮುಖಂಡರ ಜೊತೆ ಚರ್ಚೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ
ಶೀಘ್ರವೇ ಪಕ್ಷದ ಮುಖಂಡರ ಸಮಾವೇಶ ಹಮ್ಮಿಕೊಳ್ಳುವುದಾಗಿ ವಿನಯ್ ಗಾಂಧಿ ತಿಳಿಸಿದರು.
ಈಗಾಗಲೇ ಎಲ್ಲಾ ತಾಲೂಕುಗಳಲ್ಲಿ ನಮ್ಮ ಪಕ್ಷದ ಮುಖಂಡರನ್ನು ಭೇಟಿ ಚರ್ಚೆ ಮಾಡಲಾಗಿದೆ.ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷ ನೀಡಿದ್ದ ಎಲ್ಲಾ ಐದು ಗ್ಯಾರಂಟಿಗಳನ್ನು ಸರ್ಕಾರ ಜಾರಿ ಮಾಡಿರುವುದರಿಂದ ಇದರ ಲಾಭ ಎಲ್ಲಾ ವರ್ಗದವರಿಗೂ ದಕ್ಕಿದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಅಹಿಂದ ಮತದಾರರು ಮತ್ತು ಇತರರು ಹೆಚ್ಚಿದ್ದು, ಅವರೆಲ್ಲರೂ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎಲ್ಲಾ ಜನಾಂಗದ ಕಷ್ಟ ಸುಖ ದುಃಖ ದುಮ್ಮಾನ ಆಲಿಸಿದೆ. ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿ ಯಾರೇ ಆದರೂ, ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ನಾನೂ ಕೂಡ ಕಾಂಗ್ರೆಸ್‌ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು, 45 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಘಟಕಗಲ್ಲಿ ಕೆಲಸ ಮಾಡಿದ್ದೇನೆ.
6 ಬಾರಿ ವಿಧಾನಸಭೆ, 4 ಬಾರಿ ಲೋಕಸಭೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಈ ಬಾರಿ ಸಿಗುವ ವಿಶ್ವಾಸ ಇದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮುನಿಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಶರ್ಮಾ, ಅಲ್ಪಸಂಖ್ಯಾತ ಜಿಲ್ಲಾ ಮುಖಂಡ ಧಾಮಸ್ ಇದ್ದರು.